ADVERTISEMENT

ಮಾತೃ ಭಾಷೆಯೊಂದಿಗೆ ಇಂಗ್ಲಿಷ್, ಹಿಂದಿ ಕಲಿಕೆ ಅನಿವಾರ್ಯ: ಪ್ರೊ.ಜಿ.ಚಂದ್ರಶೇಖರ್‌

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 14:06 IST
Last Updated 14 ಸೆಪ್ಟೆಂಬರ್ 2022, 14:06 IST
ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ‘ಹಿಂದಿ ದಿವಸ್’ ಕಾರ್ಯಕ್ರಮವನ್ನು ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಚಂದ್ರಶೇಖರ್‌ ಉದ್ಘಾಟಿಸಿದರು
ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ‘ಹಿಂದಿ ದಿವಸ್’ ಕಾರ್ಯಕ್ರಮವನ್ನು ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಚಂದ್ರಶೇಖರ್‌ ಉದ್ಘಾಟಿಸಿದರು   

ಮೈಸೂರು: ‘ತ್ರಿಭಾಷಾ ಸೂತ್ರದ ಅನ್ವಯ ಮಾತೃ ಭಾಷೆಯೊಂದಿಗೆ ಇಂಗ್ಲಿಷ್‌ ಹಾಗೂ ಹಿಂದಿ ಕಲಿಕೆಯು ಅನಿವಾರ್ಯವಾಗಿದೆ’ ಎಂದು ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಚಂದ್ರಶೇಖರ್‌ ತಿಳಿಸಿದರು.

ನಗರದ ಜಯಲಕ್ಷ್ಮಿಪುರಂನಲ್ಲಿರುವ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆದ ‘ಹಿಂದಿ ದಿವಸ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹೆಚ್ಚಿನ ಭಾಷೆ ಕಲಿತರೆ, ಮುಂದೆ ಬದುಕು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ. ಹಿಂದಿ ಭಾಷೆಗೆ ತನ್ನದೇ ಆದ ಮಹತ್ವವಿದೆ. ಹದಿನೆಂಟು ಸಂವಿಧಾನಿಕ ಭಾಷೆಗಳಿಗೆ ನೀಡುವ ಗೌರವವನ್ನು ಹಿಂದಿ ಭಾಷೆಗೂ ನೀಡಬೇಕು’ ಎಂದು ಹೇಳಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಆರ್.ಜಯಕುಮಾರಿ, ‘ವಿದ್ಯಾರ್ಥಿಗಳಿಗೆ ಭಾಷಾ ಕಲಿಕೆ ಮುಖ್ಯ. ಹೆಚ್ಚು ಹೆಚ್ಚು ಭಾಷೆ ಕಲಿತಷ್ಟು ಜ್ಞಾನ ವೃದ್ಧಿಸುತ್ತದೆ. ಉದ್ಯೋಗ ಅವಕಾಶಗಳು ಹೆಚ್ಚುತ್ತವೆ’ ಎಂದರು.

ಹಿಂದಿ ವಿಭಾಗದ ಮುಖ್ಯಸ್ಥ ಪರಮೇಶ್ವರ ಹೆಗಡೆ ಇದ್ದರು.

ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿ ರಾಝೀಕ್ ಸ್ವಾಗತಿಸಿದರು. ದ್ವಿತೀಯ ವರ್ಷದ ಬಿ.ಎ. ವಿದ್ಯಾರ್ಥಿನಿ ಸೃಷ್ಟಿ ಆರ್. ಜೋಯಿಸ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ವರ್ಷದ ಬಿ.ಎ. ವಿದ್ಯಾರ್ಥಿನಿ ಮೆಖಿಲಾ ಶರ್ಮಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.