ADVERTISEMENT

ಒತ್ತುವರಿ ತೆರವಿಗೆ ನಿರ್ದಾಕ್ಷಿಣ್ಯ ಕ್ರಮ: ಭೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 13:32 IST
Last Updated 22 ಸೆಪ್ಟೆಂಬರ್ 2022, 13:32 IST
ಭೈರತಿ ಬಸವರಾಜ
ಭೈರತಿ ಬಸವರಾಜ   

ಮೈಸೂರು: ‘ರಾಜ್ಯದಲ್ಲಿ ಯಾವುದೇ ನಗರದಲ್ಲಿ ಒತ್ತುವರಿಯಾಗಿದ್ದರೂ ಅದನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಿರ್ದಾಕ್ಷಿಣ್ಯವಾಗಿ ನಡೆಸಲಾಗುವುದು’ ಎಂದುನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಬೆಂಗಳೂರು ನಗರದ ಜೊತೆಗೆ ರಾಜ್ಯದ ಉದ್ದಗಲಕ್ಕೂ ಒತ್ತುವರಿ ತೆರವು ಮಾಡಲಾಗುವುದು. ಕೆರೆ–ರಾಜಕಾಲವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪರಿಣಾಮ, ಮಳೆ ಬಂದಾಗ ತೀವ್ರ ಸಮಸ್ಯೆ ಆಗುತ್ತಿದೆ. ಇದನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

‘ಇತ್ತೀಚೆಗೆ 11ಸಾವಿರಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗಿದೆ. ಉಳಿದವರನ್ನೂ ಹಂತ– ಹಂತವಾಗಿ ಕಾಯಂ ಮಾಡಲಾಗುವುದು. ಅವರ ಬಹು ವರ್ಷಗಳ ಬೇಡಿಕೆಗಳನ್ನು ಈಡೇರಿಸಲಾಗುವುದು’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.