ADVERTISEMENT

ಪತ್ನಿ ಆತ್ಮಹತ್ಯೆ: ಪತಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 5:37 IST
Last Updated 6 ಡಿಸೆಂಬರ್ 2025, 5:37 IST
<div class="paragraphs"><p>ಪ್ರಾಧಿನಿಧಿಕ ಚಿತ್ರ</p></div>

ಪ್ರಾಧಿನಿಧಿಕ ಚಿತ್ರ

   

ಐಸ್ಟಾಕ್ ಚಿತ್ರ

ಮೈಸೂರು: ಪತ್ನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾದ ಸರಗೂರು ತಾಲ್ಲೂಕಿನ ತೆರಣಿಮುಂಟಿ ಗ್ರಾಮದ ಶಂಕರ್‌ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ 5ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 

ADVERTISEMENT

2022ರ ಫೆ. 24ರಂದು ಶಂಕರ್‌ ಪತ್ನಿ ಪವಿತ್ರಾ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

‘ಶಂಕರ್‌ ಪವಿತ್ರಾ ಅವರಿಗೆ ದೈಹಿಕವಾಗಿ ಹಿಂಸೆ ನೀಡುವುದಲ್ಲದೇ ಮದ್ಯಪಾನ ಮಾಡಿಕೊಂಡು ಬಂದು ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸರಗೂರು ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು.

ಅಂದಿನ ಎಸ್‌ಐ ಎಸ್‌.ಶ್ರವಣ್‌ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೆ.ಎನ್‌. ರೂಪಾ, ಅಪರಾಧ ಸಾಬೀತಾದ ಕಾರಣ 10 ವರ್ಷ ಜೈಲು ಹಾಗೂ ₹ 75 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಬಿ.ಈ.ಯೋಗೇಶ್ವರ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.