ಮೈಸೂರು: ನಗರದಠಾಣೆಯೊಂದರಲ್ಲಿ ಗೃಹರಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರನ್ನು ದಸ್ತಗೀರ್ ಎಂಬಾತ ಮದುವೆಯಾಗುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದಾನೆ.
ಇವರು ವೃತ್ತವೊಂದರಲ್ಲಿ ಭಾನುವಾರ ಕರ್ತವ್ಯ ನಿರ್ವಹಿಸುತ್ತಿರುವಾಗ ಬಂದ ಆರೋಪಿ ಮದುವೆಯಾಗುವಂತೆ ಒತ್ತಾಯಿಸಿದ್ದಾನೆ. ನಿರಾಕರಿಸಿದ್ದಕ್ಕೆ ಕಪಾಲಕ್ಕೆ ಹೊಡೆದು, ಕೈ ಹಾಗೂ ತಲೆಯ ಜುಟ್ಟನ್ನು ಹಿಡಿದು ಎಳೆದಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಆರೋಪಿಯ ಶೋಧಕ್ಕೆ ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.