ನಂಜನಗೂಡು: ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ₹450 ಕೋಟಿಗೂ ಹೆಚ್ಚು ಅನುದಾನ ತಂದು ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಲ್ಲೂಕಿನ ಹೊರಳವಾಡಿ, ಬಸವೇಶ್ವರನಗರ, ಗೀಕಹಳ್ಳಿ, ಮಹದೇವ ಗ್ರಾಮಗಳಲ್ಲಿ ಸಾಮಾನ್ಯ ವರ್ಗದವರು ವಾಸಿಸುವ ಬೀದಿಗಳಲ್ಲಿ ₹1.15 ಕೋಟಿ ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಗ್ರಾಮಗಳಲ್ಲಿ ಚರಂಡಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ವರ್ಷ ನೀಡಿದ್ದ 25 ಕೋಟಿ ಅನುದಾನದಲ್ಲಿ ಸಾಮಾನ್ಯ ವರ್ಗದ ಬೀದಿಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲಾಗಿದೆ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖಂಡರಾದ ಕಳಲೆ ಕೇಶವಮೂರ್ತಿ, ತಾಲ್ಲೂಕು ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್, ದೊರೆಸ್ವಾಮಿನಾಯಕ, ಎನ್.ಎಂ.ಮಂಜುನಾಥ್, ವಿಜಯ್ ಕುಮಾರ್, ಶ್ರೀನಿವಾಸ ಮೂರ್ತಿ, ಕುಳ್ಳಯ್ಯ, ಶಿವಮೂರ್ತಿ, ಮುದ್ದುಮಾದಶೆಟ್ಟಿ, ರಂಗದಾಸ್, ಜಯಶೀಲ, ಜಯಮಾಲಾ ಬೀರೇಗೌಡ, ಶ್ರೀಕಂಠ, ಬಸವಣ್ಣ, ಸೋಮು, ಮಹೇಶ್, ಮಂಜು, ರವಿ, ಗ್ರಾ.ಪಂ. ಸದಸ್ಯರಾದ ನವೀನ್, ಶಿವಕುಮಾರ್, ಮಹೇಂದ್ರ, ಕೆಆರ್ ಐಡಿಎಲ್ ಸಂಸ್ಥೆಯ ಎಇ ಶರಣ್, ಪುರುಷೋತ್ತಮ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.