ADVERTISEMENT

ಚರ್ಚಾ ಸ್ಪರ್ಧೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 15:57 IST
Last Updated 28 ಜೂನ್ 2025, 15:57 IST

ಮೈಸೂರು: ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ ಅಂಗಸಂಸ್ಥೆಯಾದ ವಿವೇಕಾನಂದ ಇನ್‌ಸ್ಟಿಟ್ಯೂಟ್ ಫಾರ್ ಲೀಡರ್‌ಶಿಪ್ ಡೆವಲಪ್‌ಮೆಂಟ್ ಸಂಸ್ಥೆಯು ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಚರ್ಚಾ ಸ್ಪರ್ಧೆ ಕಾರ್ಯಾಗಾರ ಆಯೋಜಿಸಿತ್ತು.

ಶಾಲಾ ವಿದ್ಯಾರ್ಥಿಗಳಲ್ಲಿ ಸಂವಹನ ಹಾಗೂ ನಾಯಕತ್ವ ಕೌಶಲಗಳನ್ನು ಬೆಳೆಸುವ ಉದ್ದೇಶದಿಂದ ಅಮೆರಿಕದ ಕಾರ್ನೆಲ್‌ ವಿ.ವಿ. ಐಎಲ್‌ಆರ್ ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ 29 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸೇಂಟ್ ಲಾರೆನ್ಸ್ ಅಂತರರಾಷ್ಟ್ರೀಯ ಶಾಲೆಯ ನಂದಿನಿ ರಾವ್ ಉದ್ಘಾಟಿಸಿದರು. ವಿವೇಕಾನಂದ ಇನ್‌ಸ್ಟಿಟ್ಯೂಟ್‌ನ ತರಬೇತಿ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಮನೋಜ್ ಸೆಬಾಸ್ಟಿಯನ್ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಸಮಾರೋಪ ಸಮಾರಂಭದಲ್ಲಿ ರಮೇಶ್, ವಿ ಲೀಡ್‌ ನಿರ್ದೇಶಕಿ ಡಾ. ರೇಖಾ, ವಿಎಸ್‌ಒಯು ಪ್ರಾಂಶುಪಾಲರಾದ ಆಮದಾ, ಭಾರತಿ ವಿದ್ಯಾಭವನ ಪ್ರಾಚಾರ್ಯರಾದ ಲೇಖಾ ನಾಯರ್ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.