
ಮೈಸೂರು: ‘ಕಾಂಗ್ರೆಸ್‌ನಲ್ಲಿ ಮುಂದಿನ ನಾಯಕತ್ವದ ಕುರಿತು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ನಾನು ಹೇಳಿದ್ದರಲ್ಲಿ ತಪ್ಪೇನಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಶನಿವಾರ ಇಲ್ಲಿ ಸಮರ್ಥಿಸಿಕೊಂಡರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ನನ್ನ ಹೇಳಿಕೆಯನ್ನು ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿಸುವುದಿಲ್ಲ’ ಎಂದರು.
ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿಯೇ, ಆಂತರಿಕ ವಿಚಾರಗಳನ್ನು ಪಕ್ಷದ ಒಳಗೇ ಮಾತನಾಡುತ್ತೇನೆ’ ಎಂದರು.
‘ಈ ಕುರಿತು ಪಕ್ಷದ ನೋಟಿಸ್ ಬಂದಾಗ ನೋಡಿಕೊಳ್ಳೋಣ. ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ. ಈಗಿನ ಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಸಿ.ಎಂ ಆಗಿ ಮುಂದುವರೆಯುತ್ತಾರೆ. ನವೆಂಬರ್, ಡಿಸೆಂಬರ್ ಕ್ರಾಂತಿ ಊಹಾಪೋಹ ಅಷ್ಟೇ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.