ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದರು.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ, 'ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರದ ಪ್ರತಿನಿಧಿಗಳು, ಅಧಿಕಾರಿಗಳು ಬಂದು ಅಹವಾಲು ಸ್ವೀಕರಿಸದಿರುವುದು ಖಂಡನೀಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣವೇ ನೌಕರರ ಬೇಡಿಕೆ ಈಡೇರಿಸಬೇಕು' ಎಂದು ಒತ್ತಾಯಿಸಿದರು.
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, 'ಸರ್ಕಾರದ ಚೌಕಟ್ಟಿನ ಹೋರಾಟದ ಧ್ವನಿಯನ್ನು ವಿಧಾನಸಭೆಗೆ ಮುಟ್ಟಿಸುವ ಕೆಲಸವನ್ನು ವಿರೋಧ ಪಕ್ಷ ಮಾಡುತ್ತದೆ. ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ಮೈಸೂರು ನೀಡಿದೆ. ಇಲ್ಲಿನ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ತಮ್ಮ ಆರೋಗ್ಯ ಹಾಳು ಮಾಡಿಕೊಂಡು ಇತರರಿಗಾಗಿ ಪಾಲಿಕೆ ನೌಕರರು ಕೆಲಸ ಮಾಡುತ್ತಾರೆ. ಅವರ ಆರೋಗ್ಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು' ಎಂದು ಆಗ್ರಹಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.