ADVERTISEMENT

ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 15:43 IST
Last Updated 19 ಡಿಸೆಂಬರ್ 2023, 15:43 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಮೈಸೂರು: ನಗರದ ಖಾಸಗಿ ಕಾಲೇಜಿನಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ಕವೀಶಾ (21) ವಸತಿ ನಿಲಯದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಊಟಿ ಮೂಲದ ಕವೀಶಾ ಅದೇ ಗ್ರಾಮದ ಕಿರಣ್‌ನನ್ನು ಪ್ರೀತಿಸುತ್ತಿದ್ದರು. ಪ್ರೀತಿಯ ಬಗ್ಗೆ ಮನೆಯವರಿಗೆ ತಿಳಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ADVERTISEMENT

‘ನಿಶ್ಚಿತಾರ್ಥದ ಬಳಿಕ ಕಿರಣ್ ವರದಕ್ಷಿಣೆಯಾಗಿ ಕಾರು ಹಾಗೂ ಚಿನ್ನ ನೀಡಬೇಕೆಂದು ಪೀಡಿಸಿದ್ದಾನೆ. ಇಲ್ಲದಿದ್ದಲ್ಲಿ ಮದುವೆ ನಿಲ್ಲಿಸುವುದಾಗಿ ಬೆದರಿಸಿದ್ದಾನೆ. ಮನನೊಂದ ಕವೀಶಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆಕೆಯ ಪೋಷಕರು ದೂರು ನೀಡಿದ್ದಾರೆ. ಈ ಹಿಂದೆಯೂ ಆಕೆ ಆತ್ಮಹತ್ಯೆಗೆ ಪ್ರಯತ್ನಸಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.