
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಪಿರಿಯಾಪಟ್ಟಣ: ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಣಿಕೊಪ್ಪ ಪಿರಿಯಾಪಟ್ಟಣ ರಸ್ತೆಯಲ್ಲಿ ಜರುಗಿದೆ. ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್ ಕುಮಾರ್ (28) ಮೃತ ಯುವಕ.
ಯೋಗೇಶ್ ಕುಮಾರ್ ಮಾಲಂಗಿ ಗ್ರಾಮದಿಂದ ತನ್ನ ಸಹೋದರಿಯ ಮನೆಗೆ ಶನಿವಾರ ತೆರಳುವ ವೇಳೆ ಎದುರಿನಿಂದ ಬಂದ ಕೆಟಿಎಂ ಬೈಕ್ ಡಿಕ್ಕಿ ಹೊಡೆದಿದೆ. ತಲೆಗೆ ಪೆಟ್ಟಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಮೃತನ ತಂದೆ ಕರಿಗೌಡ ಅವರು ದೂರು ನೀಡಿದ್ದು, ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.