ಬಂಧನ
(ಪ್ರಾತಿನಿಧಿಕ ಚಿತ್ರ)
ಮೈಸೂರು: ನಗರದ ಚಾಮರಾಜ ಜೋಡಿ ರಸ್ತೆಯಲ್ಲಿ ಚಿಂದಿ ಆಯುವ ಯುವಕರ ನಡುವಿನ ಗಲಾಟೆಯಲ್ಲಿ ಒಬ್ಬನ ಕೊಲೆಯಾಗಿದೆ.
ಶಿವಮೊಗ್ಗ ಮೂಲದ ಶಶಿಕುಮಾರ್ ಕೊಲೆಯಾದ ವ್ಯಕ್ತಿ. ಪ್ರಕರಣಕ್ಕೆ ಸಂವಂಧಿಸಿ ಅವರ ಸ್ನೇಹಿತರಾದ ನರಸಿಂಹ, ಸೀನಾ ಮತ್ತು ಪ್ರಭುನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
‘ನಾಲ್ವರೂ ಸ್ನೇಹಿತರಾಗಿದ್ದು, ಮಾದಕ ವಸ್ತು ಸೇವನೆ ಮಾಡಿದ್ದಾರೆ. ನಶೆಯಲ್ಲಿದ್ದ ವೇಳೆ ಶಶಿಕುಮಾರ್ ಮತ್ತು ಸ್ನೇಹಿತರ ನಡುವೆ ಜಗಳವಾಗಿದ್ದು, ಮೂವರೂ ಸೇರಿ ಶಶಿಕುಮಾರ್ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಕೆ.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಶಶಿಕುಮಾರ್ ಮತ್ತು ನರಸಿಂಹ ಕಾಡಾ ಕಚೇರಿ ಆವರಣದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಈಚೆಗೆ ಬಿಡುಗಡೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.