ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಸಿಪಿಐ ಮುಖಂಡರು ಇಲ್ಲಿನ ಮಹಾನಗರ ಪಾಲಿಕೆ ಕಚೇರಿ ಮುಂಭಾಗದ ಗಾಂಧಿ ಪ್ರತಿಮೆ ಎದುರುಪ್ರತಿಭಟನೆ ನಡೆಸಿದರು.
ಗಾಂಧಿ ಭಾವಚಿತ್ರ ಹಿಡಿದುಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಯಡಿಯೂರಪ್ಪ ಗೋ ಬ್ಯಾಕ್, ಸಂವಿಧಾನ ವಿರೋಧಿಗಳಿಗೆ ದಿಕ್ಕಾರ, ಸೇವ್ ಇಂಡಿಯಾ, ಸೇವ್ ಡೆಮಾಕ್ರಸಿ ಮತ್ತಿತರ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ರಾಜ್ಯ ಸಭಾ ಸದಸ್ಯ ಬಿನೊಯ್ ವಿಶ್ವಂ, ಜ್ಯೋತಿ ಕೆ., ಜ್ಯೋತಿ ಎ., ಜನಾರ್ದನ್ ಕೆ.ಎಸ್. ಸಂತೋಷ್ ಎಚ್.ಎಂ, ಸಾತಿ ಸುಂದರೇಶ್ ಮತ್ತಿತರರು ಇದ್ದರು. ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದುಕಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.