ADVERTISEMENT

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜನವರಿ 2012, 8:45 IST
Last Updated 13 ಜನವರಿ 2012, 8:45 IST

ರಾಯಚೂರು: ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ನೀಡುವಲ್ಲಿ ವಿಳಂಬ ಹಾಗೂ ತಹಸೀಲ್ದಾರ ಕಚೇರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಹಾಜರಾಗದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೈ ಕನ್ನಡ ರಕ್ಷಣಾ ವೇದಿಕೆ ಸಂಘಟನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.

ಗುರುವಾರ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಹಸೀಲ್ದಾರ ಕಚೇರಿಗೆ ಅಧಿಕಾರಿಗಳು ನಿಗದಿತ ಸಮಯಕ್ಕೆ ಬರುವುದಿಲ್ಲ. ತಹಸೀಲ್ದಾರ ಕಚೇರಿಯಲ್ಲಿರುವ ನೆಮ್ಮದಿ ಕೇಂದ್ರವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ತಹಸೀಲ್ದಾರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವಲ್ಲಿ ನಿಳಂಬ ನೀತಿ  ಅನುಸರಿಸುತ್ತಿರುವ ತಹಸೀಲ್ದಾರ ಕಚೇರಿಯ  ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಖಾಸಗಿ ಸಂಸ್ಥೆಗೆ ನೀಡಿರುವ ನೆಮ್ಮದಿ ಕೇಂದ್ರವನ್ನು ರದ್ದುಪಡಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಟಿ,ನರಸಪ್ಪ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಸಂತಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಸಂಘಟನಾ ಕಾರ್ಯದರ್ಶಿ ಉರುಕುಂದಿ, ಜಿಲ್ಲಾ ಮುಖಂಡ ವೆಂಕಟಸ್ವಾಮಿ, ವಿಜಯ, ಈಶ್ವರ, ಮಹಮ್ಮದ್ ಫಾರೂಖ್, ವಿಜಯ, ರಮೇಶ, ಆಂಜನೇಯ ಹಾಗೂ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.