ADVERTISEMENT

ಆರ್‌ಟಿಐ: ಸಮರ್ಪಕ ಜಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಜೂನ್ 2013, 10:13 IST
Last Updated 7 ಜೂನ್ 2013, 10:13 IST

ಸಿಂಧನೂರು: ತಾಲ್ಲೂಕಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೆಗೊಳಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಜೇಶನ್ ತಾಲ್ಲೂಕು ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಬಿ.ಟಿ.ಕುಮಾರಸ್ವಾಮಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಉಚಿತ ಶಿಕ್ಷಣ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಜಾರಿಯಾಗಿ ಮೂರು ವರ್ಷಗಳು ಗತಿಸಿದರೂ ಅದನ್ನು ಕಟ್ಟುನಿಟ್ಟಾಗಿ ಜಾರಿಗೆಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇದರಿಂದಾಗಿ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ.

ಕೆಲ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡದೆ ತಮ್ಮದು ಅಲ್ಪಸಂಖ್ಯಾತರ ಶಾಲೆಗಳೆಂದು ಸುಳ್ಳುವ ಹೇಳುವ ಮೂಲಕ ಅವಕಾಶದಿಂದ ವಂಚಿಸುತ್ತಿವೆ. ಗುಣಮಟ್ಟದ ಶಿಕ್ಷಣದ ಜೊತೆಗೆ ಪ್ರತಿ ಶಾಲೆಗೂ ಮೂಲಸೌಲಭ್ಯ ದೊರಕಿಸಿಕೊಡಬೇಕೆನ್ನುವ ನಿಯಮಗಳು ಸಂಪೂರ್ಣ ಉಲ್ಲಂಘನೆಯಾಗಿವೆ. ಈ ಬಗ್ಗೆ ಆಯಾ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಗಮನ ಸೆಳೆದರು.

ಒಂದುವೇಳೆ ಅರ್ಹರಿಗೆ ಅವಕಾಶ ಕೊಡದೇ ಇದ್ದರೆ ದುರುಪಯೋಗವಾಗುವ ಸಾಧ್ಯತೆಗಳಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ತಹಸೀಲ್ದಾರರಿಗೆ ಎಸ್‌ಐಒ ಪದಾಧಿಕಾರಿಗಳು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT