ADVERTISEMENT

ಒಡೆದ ಕಾಲುವೆ: ನೀರು ಪೋಲು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 8:35 IST
Last Updated 13 ಸೆಪ್ಟೆಂಬರ್ 2011, 8:35 IST

ಜಾಲಹಳ್ಳಿ: ಇಲ್ಲಿಗೆ ಸಮೀಪದ ಉತ್ತಿನ ಯಲ್ಲಮ್ಮದೇವಸ್ಥಾನದ ಹತ್ತಿರ ಸೋಮವಾರ ನಾರಾಯಣಪೂರ ಬಲದಂಡೆ ಕಾಲುವೆಯ 9ನೇ ವಿತರಣಾ ನಾಲೆಯ ಬಿಡಿ 2ರಲ್ಲಿ ಕಾಲುವೆ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿದೆ.

ರೈತರು ಸಾವಿರಾರು ರೂಪಾಯಿ ಸಾಲ ಮಾಡಿ ಬೆಳೆದ ಬೆಳೆಗಳಿಗೆ ಮುಂದಿನ ದಿನಗಳಲ್ಲಿ ನೀರಿನ       ಅಭಾವ ಉಂಟಾಗಿ ತೀವ್ರ ತೊಂದರೆ ಅನುಭವಿಸಬೇಕಾಗಿದೆ.

ಈಚೆಗೆ ಈ ನಾಲೆಗೆ ಸುಮಾರು 5 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ಥಿ ಹಾಗೂ ಸ್ವಚ್ಚ ಮಾಡಲು ಕಾಮಾಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಇಲ್ಲಿಯ ರೈತರು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಸವರಾಜ ತೇಕೂರು ತಿಳಿಸಿದರು.

ಸಂಬಂಧಿಸಿದ ಎನ್ನಾರ‌್ಬಿಸಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ    ಕಾಲುವೆ ಒಡೆಯಲು ಕಾರಣವಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.