ರಾಯಚೂರು: ಜನತಾ ನ್ಯಾಯಾಲಯ, ಕಾನೂನು ನೆರವು-ಅರಿವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ಸ್ಥಳದಲ್ಲಿಯೇ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ `ಕಾನೂನು ರಥ' ಹೊರಡುತ್ತಿದೆ. ಸಂಚಾರ ಸುರಕ್ಷತೆ ನಿಯಮಗಳ ಬಗ್ಗೆ ಸಾರಿಗೆ ಅಧಿಕಾರಿ ಮತ್ತು ಸಂಚಾರ ಪೊಲೀಸರು ಜಾಥಾ ಸಂದರ್ಭದಲ್ಲಿ ಜನತೆಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಜೆ ಸತೀಶಸಿಂಗ್ ಹೇಳಿದರು.
ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಎಲ್ಲ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿ ವ್ಯಾಜ್ಯ ಪರಿಹರಿಸುವ ದಿಶೆಯಲ್ಲಿ ಹಮ್ಮಿಕೊಂಡ `ಕಾನೂನು ರಥಕ್ಕೆ' ಹಸಿರು ನಿಶಾನೆ ತೋರಿ ಮಾತನಾಡಿದರು.
ನ್ಯಾಯಾಧೀಶರು, ವಕೀಲರು ಈ ಕಾನೂನು ರಥದ ಸಂಚಾರಿ ನ್ಯಾಯಾಲಯದಲ್ಲಿ ಇರುತ್ತಾರೆ. ವ್ಯಾಜ್ಯ ಪರಿಹರಿಸಲಾಗುತ್ತದೆ. ಕಕ್ಷಿದಾರರು ಈ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಮಹಮ್ಮದ್ ಮುಜಾಹಿದುಲ್ಲಾ, ನ್ಯಾಯಾಧೀಶರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.