ADVERTISEMENT

ಕಾಮಗಾರಿ ಕಳಪೆ; ಆರೋಪ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2012, 8:15 IST
Last Updated 18 ನವೆಂಬರ್ 2012, 8:15 IST

ರಾಯಚೂರು: ಇಲ್ಲಿಗೆ ಸಮೀಪದ ಏಳು ಮೈಲ್ ಕ್ರಾಸ್‌ದಿಂದ ಸಿದ್ಧನಬಾವಿ ಕ್ಯಾಂಪ್ ಕೂಡು ರಸ್ತೆ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ. ಕಾಮಗಾರಿಗೆ ನಿಗದಿಪಡಿಸಿದ ಮೊತ್ತದಲ್ಲಿ ಭ್ರಷ್ಟಾಚಾರ ನಡೆದಿದ್ದು ತಕ್ಷಣ ಸಂಬಂಧಪಟ್ಟವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಸೇನೆ ಜಿಲ್ಲಾ ಘಟಕ ಜಿಲ್ಲಾಡಳಿತಕ್ಕೆ ಒತ್ತಾಯ ಮಾಡಿದೆ.

ಪ್ರಥಮ ದರ್ಜೆ ಗುತ್ತಿಗೆದಾರ ಎಂ ಈರಣ್ಣನವರು ಕಾಮಗಾರಿ ನಿರ್ವಹಿಸಿದ್ದಾರೆ. ಈ ರಸ್ತೆ ಅಭಿವೃದ್ಧಿಗೆ ಬಿಡುಗಡೆಯಾದ ಮೊತ್ತ 164.38 ಲಕ್ಷ. ಕಾಮಗಾರಿಗೆ ತಗಲಿರುವ ಮೊತ್ತ 103.01 ಲಕ್ಷ ಮಾತ್ರ. ಕಾಮಗಾರಿಗೆ ನಿಗದಿಪಡಿಸಿದ ಮೊತ್ತದ ಅರ್ಧದಷ್ಟು ಮೊತ್ತವನ್ನೂ ಕಾಮಗಾರಿಗೆ ಕರ್ಚು ಮಾಡಿಲ್ಲ ಎಂದು ದೂರಿದೆ.

ಕಳಪೆ ಕಾಮಗಾರಿ ಮಾಡಿದ್ದರೂ ಹಣ ಬಿಡುಗಡೆ ಮಾಡಿರುವುದು ವಿಪರ್ಯಾಸದ ಸಂಗತಿಯಾಗಿದೆ. ಕೂಡಲೇ ಸಂಬಂಧಪಟ್ಟ ಗುತ್ತಿಗೆದಾರ, ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಜಿಲ್ಲಾಧ್ಯಕ್ಷ ನರೇಂದ್ರಪ್ರಸಾದ್ ಕಟ್ಟಿಮನಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.