ADVERTISEMENT

ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾಗಲು ಕರೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 8:20 IST
Last Updated 3 ಅಕ್ಟೋಬರ್ 2011, 8:20 IST

ಸಿಂಧನೂರು:  ಕಟ್ಟಡ ಕಾರ್ಮಿಕರು ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯರಾದರೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಕಾರಣ ಸದಸ್ಯತ್ವ ನೊಂದಾಯಿಸಿಕೊಳ್ಳುವಂತೆ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ನಿಂಗಪ್ಪ.ಎನ್.ಆರ್., ಕರೆ ನೀಡಿದರು.

ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿ ಸಿಐಟಿಯುನಿಂದ ಈಚೆಗೆ ಏರ್ಪಡಿಸಿದ್ದ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಮಿಕ ನಿರೀಕ್ಷಕ ಶಫಿವುಲ್ಲಾ ಮಾತನಾಡಿ, ಕಾರ್ಮಿಕರಿಗೆ ಸಿಗುವ ಧನಸಹಾಯ, ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವೈದ್ಯೈ ಸೌಲಭ್ಯ ಮತ್ತಿತರ ಪರಿಹಾರಗಳನ್ನು ನೀಡಲಾಗ್ದು. ಕಾರ್ಮಿಕ ಮಂಡಳಿಯಲ್ಲಿ ಸಾಕಷ್ಟು ಹಣ ಇದ್ದರೂ ಕಾರ್ಮಿಕರು ಸದುಪಯೋಗಪಡಿಸಿಕೊಳ್ಳುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಕಟ್ಟಡ ಕಾರ್ಮಿಕರ ಜಿಲ್ಲಾಧ್ಯಕ್ಷ ಶೇಕ್ಷಾಖಾದ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುತ್ತಣ್ಣ ಕಾರ್ಯಕ್ರಮ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.