ADVERTISEMENT

ಕೋರ್ಟಿಗೆ ಪೂಜಾಗಾಂಧಿ ಹಾಜರು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 5:49 IST
Last Updated 5 ಡಿಸೆಂಬರ್ 2017, 5:49 IST

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ವಿಚಾರಣೆ ಸಂಬಂಧ ಚಿತ್ರ ನಟಿ ಪೂಜಾ ಗಾಂಧಿ ಅವರು ಸೋಮವಾರ ನ್ಯಾಯಾಲಯಕ್ಕೆ ಹಾಜರಾದರು.

ರಾಯಚೂರಿನ ಜೆಎಂಎಫ್‌ಸಿ 2ನೇ ನ್ಯಾಯಾಲಯದಲ್ಲಿ ಪೂಜಾಗಾಂಧಿ ಪ್ರಕರಣ ವಿಚಾರಣೆ ನಡೆದಿದ್ದು, ವಿಚಾರಣೆಯನ್ನು ಡಿಸೆಂಬರ್‌ 13ಕ್ಕೆ ಮುಂದೂಡಲಾಗಿದೆ.

2013ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಆರ್ ಕಾಂಗ್ರೆಸ್‌ ಪಕ್ಷದಿಂದ ರಾಯಚೂರು ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣಾ ಪ್ರಚಾರದ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ದಾಖಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.