ADVERTISEMENT

ಗೋಹತ್ಯೆ ನಿಷೇಧ: ಸಿದ್ದು ಟೀಕಿಸಿದ ಶ್ರೀಶೈಲ ಶ್ರೀ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 18:43 IST
Last Updated 17 ಜೂನ್ 2019, 18:43 IST
ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ
ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ   

ರಾಯಚೂರು: ‘ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಮನವಿ ಮಾಡಿದರೂ ಹಿಂದಿನ ಮುಖ್ಯಮಂತ್ರಿ ಸ್ಪಂದಿಸಲಿಲ್ಲ. ಗೋಮಾಂಸದ ರುಚಿ ಸ್ವಾಮಿಗಳಿಗೇನು ಗೊತ್ತು ಎಂದು ಹೀಯಾಳಿಸಿ ಮಾತನಾಡಿದ್ದರು. ಈಗ ಅವರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು’ ಎಂದು ಶ್ರೀಶೈಲ ಪೀಠದ ಪೀಠಾಧಿಪತಿ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಉಲ್ಲೇಖಿಸದೇ ಟೀಕಿಸಿದರು.

‘ಕೇಂದ್ರ ಸರ್ಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಿದ್ದು, ರಾಜ್ಯದಲ್ಲಿಯೂ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಅವರು ಇಲ್ಲಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT