ADVERTISEMENT

ಚಿಕೂನ್‌ ಗುನ್ಯಾ: ಸ್ವಚ್ಛತೆ ಕಾಪಾಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 10:41 IST
Last Updated 27 ಮಾರ್ಚ್ 2018, 10:41 IST

ಕವಿತಾಳ: ಸಮೀಪದ ಕುರಕುಂದಿ ಗ್ರಾಮದಲ್ಲಿ ಶಂಕಿತ ಚಿಕೂನ್‌ ಗುನ್ಯಾ ಜ್ವರ  ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸೋಮವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ ಸೊಳ್ಳೆಗಳ ಹಾವಳಿ ಮತ್ತು ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಸ್ವಚ್ಛತೆ ಕಾಪಾಡುವುದು ಸೇರಿದಂತೆ ಶುದ್ಧ ನೀರು ಕುಡಿಯಬೇಕು. ಗ್ರಾಮದಲ್ಲಿ 34 ಜನರಿಗೆ ತೀವ್ರ ಜ್ವರ, ಮೈ, ಕೈ ನೋವು ಕಾಣಿಸಿಕೊಂಡಿದೆ ತುರ್ತು ಚಿಕಿತ್ಸೆಗಾಗಿ ಮೂವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಚರಂಡಿಗಳು ತುಂಬಿ ಹರಿಯುತ್ತಿದ್ದು ಸ್ವಚ್ಛತೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಯಿತು.

ADVERTISEMENT

ಡಾ.ಪ್ರವೀಣಕುಮಾರ ಮತ್ತು ಪ್ರಭುಲಿಂಗ ಮತ್ತು ಗುರಮ್ಮ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.