ADVERTISEMENT

ಜನನಿ ಸುರಕ್ಷಾ ಯೋಜನಾ ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 10:39 IST
Last Updated 17 ಡಿಸೆಂಬರ್ 2012, 10:39 IST

ರಾಯಚೂರು (ಮಾವಿನಭಾವಿ): ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಜನನಿ ಸುರಕ್ಷಾ ಯೋಜನಾ ಕಾರ್ಯಕ್ರಮವು ಮಹತ್ವ ಪೂರ್ಣ ಕಾರ್ಯಕ್ರಮವಾಗಿರುತ್ತದೆ ಎಂದು ಸಜ್ಜಲಗುಡ್ಡ ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ವೈದ್ಯಾಧಿಕಾರಿ ಡಾ.ಮೇಘನಾ .ಆರ್ ಹೇಳಿದರು.

ಲಿಂಗಸುಗೂರು ತಾಲ್ಲೂಕಿನ ಮಾವಿನಭಾವಿ ಗ್ರಾಮದಲ್ಲಿ ರಾಯಚೂರು ವಾರ್ತಾ ಇಲಾಖೆ, ಕ್ಷೇತ್ರ ಪ್ರಚಾರ ನಿರ್ದೇಶನಾಲಯ ಬಳ್ಳಾರಿ, ನೆಹರು ಯುವ ಕೇಂದ್ರ ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಗ್ರಾಮ ಪಂಚಾಯತ, ದ್ಯಾವಮ್ಮ ದೇವಿ, ಸರಸ್ವತಿ, ಧನಲಕ್ಷ್ಮಿ  ಸ್ತ್ರೀ ಶಕ್ತಿ ಸಂಘ  ಮತ್ತು ಸಹಜೀವನ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಜನನಿ ಸುರಕ್ಷಾ ಯೋಜನೆ ಮತ್ತು ರೋಗ ನಿರೋಧಕ ಲಸಿಕೆಗಳ ಕುರಿತ ವಿಚಾರ ಸಂಕಿರಣ ಮತ್ತು ಜನನಿ ಸುರಕ್ಷಾ ಯೋಜನೆ ಕುರಿತ ಜನಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತಾನಾಡಿದರು.

ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲೂ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಉದ್ದೇಶ ರಾಜ್ಯದಲ್ಲಿ ತಾಯಂದಿರ ಮರಣ ಮತ್ತು ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸುವುದು ಅಲ್ಲದೇ ಕಡು ಬಡವರ್ಗಕ್ಕೆ ಸೇರಿದ ಗರ್ಭೀಣಿಯರು ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದಾಗಿದೆ ಎಂದರು.

ಮತ್ತೊಬ್ಬ ಉಪನ್ಯಾಸಕ ಲಿಂಗಸುಗೂರು ತಾಲ್ಲೂಕು ಆರೋಗ್ಯ ಇಲಾಖೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ತಾಯರೆಡ್ಡಿ  ಮಾತನಾಡಿ, ರೋಗ ನಿರೋಧಕ ಚುಚ್ಚು ಮದ್ದುಗಳನ್ನು ನೀಡುವುದರಿಂದ ಏಳು ಮಾರಕ ರೋಗಗಳಾದ ಬಾಲಕ್ಷಯ, ಪೋಲಿಯೋ, ಗಂಟಲು ಮಾರಿ, ನಾಯಿಕೆಮ್ಮು, ಧನುರ್ವಾಯು, ಧಡಾರ, ಹೆಪಟೈಟಿಸ್-ಬಿಗಳಿಂದ ನಮ್ಮ ಶಿಶುಗಳನ್ನು ರಕ್ಷಿಸಬಹುದು ಎಂದು ಹೇಳಿದರು.

ಮುಖ್ಯ ಅತಿಥಿಗಳಾದ ಜಿಲ್ಲಾ ಆರೋಗ್ಯ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪವಾಡೆಪ್ಪ ಅವರು ಆರೋಗ್ಯ ಇಲಾಖೆಗಳ ಸೇವೆಗಳ ಕುರಿತು ಮಾತಾನಾಡಿದರು.ಮಾವಿನಭಾವಿ ಗ್ರಾಮ ಪಂಚಾಯತ ಸದಸ್ಯ ದೇವಕಮ್ಮ ಅವರು ವಿಚಾರ ಸಂಕಿಣವನ್ನು ಉದ್ಘಾಟಿಸಿದರು.ಕ್ಷೇತ್ರ ಪ್ರಚಾರ ಸಹಾಯಕ ಜಿ.ಪ್ರಕಾಶ ಅವರು ಸ್ವಾಗತ ಕೋರಿದರು. ಮಾವಿನಭಾವಿ ಕಿರಿಯ ಆರೋಗ್ಯ ಸಹಾಯಕ ನಿಂಗಪ್ಪ.ಪಿ.ಬೋಡಕೆ ವಂದಿಸಿದರು.

ರಾಯಚೂರು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕನುಮಪ್ಪ, ಸರಕಾರಿ ಪ್ರೌಢ ಶಾಲೆಯ ಮುಖ್ಯಗುರುಗಳಾದ ಎಂ.ಜಿ.ಉಪನಾಳ, ಗ್ರಾಮದ ಮುಂಖಡರಾದ ಬಸನಗೌಡ, ಬಸಲಿಂಗಪ್ಪ, ಹನಮಪ್ಪ, ಕಿರಿಯ ಆರೋಗ್ಯ ಸಹಾಯಕಿ ಗೌಸಿಯಾ ಬಾನು, ಅಂಗನವಾಡಿ ಮೇಲ್ವಿಚಾರಕಿ ಬಸಮ್ಮ ನಾಗರಹಾಳ,  ಸಹಜೀವನ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಹೆಬ್ಬಾಳ ಉಪಸ್ಥಿತರಿದ್ದರು. ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕುರಿತು ಜಾಥಾ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.