ADVERTISEMENT

ಜಿಲ್ಲೆಯ ಬರ ನಿರ್ವಹಣೆಗೆ 25 ಕೋಟಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2012, 8:50 IST
Last Updated 16 ಆಗಸ್ಟ್ 2012, 8:50 IST

ರಾಯಚೂರು: ಜಿಲ್ಲೆಯ ಬರ ನಿರ್ವಹಣೆಗಾಗಿ 25 ಕೋಟಿ ಹಾಗೂ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದ ಅಭಿವೃದ್ಧಿ ಸಂಬಂಧಿಸಿದಂತೆ 12 ಕೋಟಿ ವಿಶೇಷ ಅನುದಾನ ಬಿಡುಗಡೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೀನುಗಾರಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಅಸ್ನೋಟಿಕರ್ ಅವರು ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ರೀಡಾಂಗಣದ ನವೀಕರಣದ ಬಗ್ಗೆ 12 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಜಗದೀಶಶೆಟ್ಟರ್ ಅವರು ಒಪ್ಪಿದ್ದಾರೆ. ಲೋಕೋಪಯೋಗಿ ಇಲಾಖೆಯವತಿಯಿಂದ ಕ್ರೀಡಾಂಗಣವನ್ನು ನೆಲಸಮಗೊಳಿಸಿ ನೂತನ ಕ್ರೀಡಾಂಗಣ ನಿರ್ಮಾಣಕ್ಕೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಬರಪರಿಹಾರ ಕಾಮಗಾರಿಗಳ ಸಂಬಂಧಿಸಿದಂತೆ 25 ಕೋಟಿ ಅನುದಾನ ಬಿಡುಗಡೆಗೊಳಿಸಲು  ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಮುಖ್ಯಮಂತ್ರಿಗಳು ಸೇತುವೆ ಉದ್ಘಾಟನಾ ಕಾರ್ಯಕ್ರಮ ಆಗಮಿಸುವ ಮುನ್ನ ಒಂದು ದಿನಪೂರ್ತಿ ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಕುರಿತು ಪಟ್ಟಿ ತಯಾರಿಸಿದ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.

ಲ್ಲೆಯಲ್ಲಿ 20 ಮೀನು ಮಾರಾಟ ಕೇಂದ್ರಗಳನ್ನು ಆರಂಭಿಸಲು  ಸರ್ಕಾರಕ್ಕೆ 1 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಕೆ ಸಲ್ಲಿಸಲಾಗಿದೆ. ಆದರೆ, ಇದನ್ನು 2.50ಕೋಟಿ ಅನುದಾನ ಹೆಚ್ಚಿಸಿ ಒಳ ಮೀನುಗಾರಿಕೆ ಅಭಿವೃದ್ಧಿಗೆ  ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ವಿವಿಧ ಇಲಾಖೆಯಲ್ಲಿ  ಖಾಲಿರುವ ಅಧಿಕಾರಿಗಳ ಹಾಗೂ ವೈದ್ಯರ ನೇಮಕ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಆಸರೆ ಯೋಜನೆಯಡಿ ನಿರ್ಮಿಸಲಾದ ಮನೆಗಳ ವಿತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂವಿಧಾನ 371ನೇ  ವಿಶೇಷ ಸ್ಥಾನಮಾನವನ್ನು ವಿಜಾಪುರ ಜಿಲ್ಲೆಗೆ ನೀಡಬೇಕು ಎಂಬ ಮುಖ್ಯಮಂತ್ರಿಗಳ ಹೇಳಿಕೆಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.

ಸಂಸದ ಫಕೀರಪ್ಪ, ಶಾಸಕ ಸಯ್ಯದ್ ಯಾಸಿನ್, ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ ಬಿಸ್ನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.