ADVERTISEMENT

ತಗ್ಗು ಪ್ರದೇಶಗಳಲ್ಲಿ ನೀರು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 8:53 IST
Last Updated 14 ಅಕ್ಟೋಬರ್ 2017, 8:53 IST

ಮಸ್ಕಿ: 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಸೋಮನಾಥ ನಗರ, ಧನಗಾರವಾಡಿ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ವಾರ್ಡ್‌ಗಳ ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣ ನೀರು ಸಂಗ್ರಹಗೊಂಡಿದೆ. ಸೋಮನಾಥ ನಗರದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಉರ್ದು ಶಾಲಾ ಆವರಣ , ಬಾಳೆಕಾಯಿ ಮಿಲ್‌ , ಗಾಂಧಿ ನಗರ ನೀರಿನಿಂದ ಆವೃತಗೊಂಡಿದೆ.

‘ನಿಂತ ನೀರು ಪಾಚಿಗಟ್ಟಿದೆ. ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗಿದೆ. ಇಲ್ಲಿಯ ಕೆಲವೊಂದು ಮನೆಗಳ ಸುತ್ತಮುತ್ತಲಿನ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹಗೊಂಡಿದೆ. ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ’ ಎಂದು ಸ್ಥಳೀಯರು ದೂರಿದ್ದಾರೆ.

‘ಪುರಸಭೆ ಸಿಬ್ಬಂದಿ ನೀರು ಹರಿದು ಹೋಗಲು ಕ್ರಮ ಕೈಗೊಂಡಿದ್ದಾರೆ. ಮಳೆ ನೀರು ನಿಂತಿದ್ದರಿಂದ ಸಾಂಕ್ರಾಮಿಕ ರೋಗಗಳು ಹಬ್ಬುವ ಸಾಧ್ಯತೆ ಇದೆ. ಕೂಡಲೇ ಪುರಸಭೆ ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.