ADVERTISEMENT

ತರಕಾರಿ ವ್ಯಾಪಾರಕ್ಕೆ ಸ್ಥಳ ಕಲ್ಪಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 9:50 IST
Last Updated 15 ಮಾರ್ಚ್ 2012, 9:50 IST

ರಾಯಚೂರು: ನಗರದಲ್ಲಿರುವ  ತರಕಾರಿ ಮಾರುಕಟ್ಟೆ ವ್ಯವಹಾರಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಸ್ಥಳವನ್ನು ಕಲ್ಪಿಸಿಕೊಡಬೇಕು ಎಂದು ರಾಯಚೂರು ತಕಾರಿ ಹೋಲ್‌ಸೇಲ್ ಮತ್ತು ರಿಟೇಲ್ ವ್ಯಾಪಾರಸ್ಥರ ಕಲ್ಯಾಣ ಸಂಘವು ಒತ್ತಾಯಿಸಿದೆ.

ಬುಧವಾರ ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಈ ಹಿಂದೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯ ಸಗಟು ವ್ಯಾಪಾರ ಹಳೆ ಉಸ್ಮಾನಿಯ ಮಾರುಕಟ್ಟೆಯಲ್ಲಿ ನಡೆಯುತ್ತಿತ್ತು. 2011ರಲ್ಲಿ ನೆಲಸಮಗೊಳಿಸಿ ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕಾಗಿ ಯೋಜನೆಯನ್ನು ರೂಪಿಸಲಾಗಿದೆ. ಆದರೆ, ಇದುವರೆಗೂ ಯಾವುದೇ ರೀತಿಯಲ್ಲಿ ಪ್ರಗತಿ ಕಂಡಿಲ್ಲ ಎಂದು ಸಮಸ್ಯೆ ವಿವರಿಸಿದರು.

ಸಗಟು ಹಾಗೂ ಚಿಲ್ಲರೆ ತರಕಾರಿ ವ್ಯಾಪಾರಕ್ಕಾಗಿ ನಗರದ ಹೊರವಲಯದಲ್ಲಿ ಖಾಯಂ ಸ್ಥಳವನ್ನು ಗುರುತಿಸಿ ಆದೇಶ ಹೊರಡಿಸಬೇಕು, ರಾಯಚೂರು-ಯರಮರಸ್ ರಸ್ತೆಯಲ್ಲಿರುವ ಬಿಎಸ್‌ಎನ್‌ಎಲ್ ಕಚೇರಿ ಪಕ್ಕದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧೀನದಲ್ಲಿರುವ ಖಾಲಿ ಸ್ಥಳವನ್ನು  ಸಗಟು ಹಾಗೂ ಚಿಲ್ಲರೆ ವ್ಯಾಪಾರಕ್ಕಾಗಿ ಮಾರುಕಟ್ಟೆ ನಿರ್ಮಾಣಕ್ಕೆ ಆದೇಶ ನೀಡಬೇಕು ಎಂದು ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಕಾರ್ಯದರ್ಶಿ ಎ.ನಾಗರಾಜ ಅವರು ಎಪಿಎಂಸಿ ನಿರ್ದೇಶಕರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ತರಕಾರಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.