ADVERTISEMENT

ತಾಪಂಗೆ ರೂ.1ಕೋಟಿ ಅನುದಾನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2011, 10:55 IST
Last Updated 9 ಸೆಪ್ಟೆಂಬರ್ 2011, 10:55 IST

ಲಿಂಗಸುಗೂರ: ತಾಲ್ಲೂಕು ಪಂಚಾಯಿತಿ ಆಡಳಿತ ವ್ಯವಸ್ಥೆಗೆ ಕಳೆದ ಎರಡು ಅವಧಿಗಳಿಂದ ಸ್ವತಂತ್ರ ಅನುದಾನದ ಕೊರತೆ ಇದೆ ಎಂಬ ಆರೋಪಗಳು ಸಾಮಾನ್ಯವಾಗಿತ್ತು. ಆದರೆ, ಸರ್ಕಾರ 2011-12ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪ್ರತಿ ತಾಲ್ಲೂಕು ಪಂಚಾಯಿತಿಗೆ ರೂ. 1ಕೋಟಿ ಅನುದಾನ ನೀಡಿದ್ದು ಹರ್ಷ ತಂದಿದೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಸವರಾಜ ಮಾಕಾಪುರ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಎಂ.ಎಸ್. ರವಿಶಂಕರ ಜುಲೈ 2011ರಲ್ಲಿ ಅನುದಾನದ ಬಳಕೆಗೆ ಸಂಬಂಧಿಸಿ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ತಾಲ್ಲೂಕು ಪಂಚಾಯಿತಿ ಸರ್ವ ಸದಸ್ಯರ ಗಮನಕ್ಕೆ ತಂದು ಕ್ರಿಯಾಯೋಜನೆ ಸಿದ್ಧಪಡಿಸಲಾಗುವುದು. ಕ್ರಿಯಾ ಯೋಜನೆ ಸಿದ್ಧಪಡಿಸುವಾಗ ಅನುಸರಿಸಬೇಕಾದ ಮಾನದಂಡಗಳನ್ನು ವಿಧಿಸಲಾಗಿದೆ ಎಂದರು.

ನಂಜುಂಡಪ್ಪ ವರದಿ ಅನುಷ್ಠಾನ ಸಮಿತಿಯಿಂದ ಕೂಡ ತಾಲ್ಲೂಕಿಗೆ ರೂ. 82ಲಕ್ಷ ಅನುದಾನ ಬಿಡುಗಡೆಯಾಗಿದೆ. ಆ ಅನುದಾನಕ್ಕೆ ಸಂಬಂಧಿಸಿ ಕೂಡ ಕ್ರಿಯಾಯೋಜನೆ ಸಿದ್ಧಪಡಿಸಿ ತಾಲ್ಲೂಕು ಪಂಚಾಯಿತಿಗೆ ಬಂದಿರುವ ಅನುದಾನದ ಸದ್ಭಳಕೆಗೆ ಸರ್ವ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.