ADVERTISEMENT

‘ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ’

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 14:00 IST
Last Updated 2 ಏಪ್ರಿಲ್ 2018, 14:00 IST

ರಾಯಚೂರು: ‘ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಪಕ್ಷಗಳ ಕಾರ್ಯಕರ್ತರ ಸಭೆ ಕರೆದು ಚುನಾವಣೆಯ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.‘ರಾಜಕೀಯ ನಾಯಕರ ಭಾವಚಿತ್ರ ಹಾಗೂ ಕಟೌಟ್‌ಗಳನ್ನು ತೆರವುಗೊಳಿಸಲಾಗಿದ್ದು, ಆದರೆ ನಿಧನರಾದವರ ಭಾವಚಿತ್ರಗಳಿಗೆ ಆಯೋಗದಿಂದ ಆಕ್ಷೇಪಣೆ ಇಲ್ಲ. ರಾಜಕೀಯ ಪಕ್ಷದವರು ಕಾರ್ಯಕ್ರಮ ನಡೆಸುವಾಗ ಆಯೋಗದ ನೀತಿ ಸಂಹಿತೆಗೆ ಅನುಗುಣವಾಗಿ ಪರವಾನಗಿ ಪಡೆದು ಕೊಳ್ಳಬೇಕು’ ಎಂದರು.

ಸೈಕಲ್‌ನ್ನು ವಾಹನವಾಗಿ ಪರಿಗಣನೆ ಮಾಡಲಾಗುತ್ತಿದ್ದು, ‍ರ‍್ಯಾಲಿಯಲ್ಲಿ 10 ವಾಹನಗಳಿಗಿಂತ ಹೆಚ್ಚಿನ ವಾಹನಗಳನ್ನು ಬಳಸಬಾರದು. ಪ್ರಚಾರಕ್ಕೆ ಅನುಮತಿ ಪಡೆದ ವಾಹನಗಳನ್ನೇ ಬಳಕೆ ಮಾಡಬೇಕು. ನಾಮಪತ್ರ ಸಲ್ಲಿಸುವಾಗ ಮೂರು ವಾಹನ ಹಾಗೂ ಐವರು ಜನರು ಆರ್‌ಓ ಕಚೇರಿಯೊಳಗೆ ಪ್ರವೇಶ ನೀಡಲಾಗುತ್ತದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಭಿರಾಂ ಜಿ.ಶಂಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಕಿಶೋರಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ , ಬಿಜೆಪಿ ಜಿಲ್ಲಾ ಅಧ್ಯಕ್ಷ ಜೆ.ಶರಣಗೌಡ, ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ಜಿ.ಶಿವಮೂರ್ತಿ, ಜೆಡಿಎಸ್‌ ಜಿಲ್ಲಾ ಘಟಕ ಅಧ್ಯಕ್ಷ ಎಂ.ವಿರೂಪಾಕ್ಷಿ, ಹನುಮಂತಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.