ADVERTISEMENT

ಪಟ್ಟಣ ಪಂಚಾಯಿತಿಯಲ್ಲಿ ಭ್ರಷ್ಟಾಚಾರ: ಆರೋಪ

ವಿವಿಧ ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2018, 7:17 IST
Last Updated 2 ಜೂನ್ 2018, 7:17 IST

ಕವಿತಾಳ: ಪಟ್ಟಣ ಪಂಚಾಯಿತಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆ ಪದಾಧಿಕಾರಿಗಳು ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಮ್ಯಾಗಳಮನಿ ಮಾತನಾಡಿ, ಕುಡಿಯುವ ನೀರು, ಚರಂಡಿ ಮತ್ತು ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ವೈಯಕ್ತಿಕ ಶೌಚಾಲಯ ನಿರ್ಮಿಕೊಂಡ ಫಲಾನುಭವಿಗಳಿಗೆ ಸಹಾಯಧನ ಮಂಜೂರು ಮಾಡುವಲ್ಲಿ ವಿಳಂಬವಾಗುತ್ತಿದೆ ಎಂದು ಆರೋಪಿಸಿದರು.

ಹಳೆ ಬಸ್ ನಿಲ್ದಾಣದಿಂದ ಬಜಾರ್‌ ಸಂಪರ್ಕ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸರಿಪಡಿಸಬೇಕು. ಗ್ರಂಥಾಲಯ ಕಟ್ಟಡ ದುರಸ್ತಿ ಹಾಗೂ ಗ್ರಂಥಪಾಲಕರ ನೇಮಕ ಮಾಡಬೇಕು. ಪಟ್ಟಣ ಪಂಚಾಯಿತಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘಟನೆ ನಗರ ಘಟಕದ ಅಧ್ಯಕ್ಷ ಮಹ್ಮದ್ ರಫಿ, ಉಪಾಧ್ಯಕ್ಷ ಎಂ.ಡಿ.ಶಫಿ, ಸುಲ್ತಾನ್ ಬಾಬಾ, ಶಿವಕುಮಾರ ಸಾನಬಾಳ, ಲಿಂಗರಾಜ ಕಂದಗಲ್, ಎಂ.ಡಿ.ಮೆಹಬೂಬ್, ದೇವರಾಜ ದಿನ್ನಿ, ಅಹ್ಮದ್ ಪಟೇಲ್, ಶಿವರಾಜ ತೋಳ, ಸುರೇಶ, ಮೆಹಬೂಬ್ಸಾಬ್ ಅರಿಕೇರಿ, ಶಿವಲಿಂಗಪ್ಪ ಸಜ್ಜನ, ಶಿವನಪ್ಪ ದಿನ್ನಿ, ನಿಂಗಪ್ಪ ತೋಳ, ವಿರುಪಾಕ್ಷಪ್ಪ ಹೂಗಾರ, ಮರಿಯಪ್ಪ, ಗಂಗಾಧರ, ಯಲ್ಲಪ್ಪ ಮತ್ತು ಲಕ್ಷ್ಮಣ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.