ADVERTISEMENT

ಪಟ್ಟದ್ದೇವರ ಮೂರ್ತಿ ಅನಾವರಣ ನಾಳೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2012, 10:57 IST
Last Updated 11 ಡಿಸೆಂಬರ್ 2012, 10:57 IST

ರಾಯಚೂರು: ದೇಶದ ಪ್ರತಿಯೊಬ್ಬ ನಾಗರಿಕರಿಗೂ ಆಧಾರ ಕಾರ್ಡ್ ಅವಶ್ಯಕವಾಗಿದೆ. ಈ ಆಧಾರ ಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ  ಮುಂದಾಗಬೇಕು ಎಂದು  ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ  ಎಚ್. ಎಸ್ ಮಿಟ್ಟಲಕೋಡ್ ಹೇಳಿದರು.

ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೋಮವಾರ   ಆಯೋಜಿಸಿದ್ದ ರಾಯಚೂರು ಜಿಲ್ಲೆಯಲ್ಲಿ ಎರಡನೇ ಹಂತದ ಆಧಾರ ಯೋಜನೆ ಅನುಷ್ಠಾನ-2012ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬರ ಒಂದಕ್ಕಿಂತ ಅಧಿಕಾರ ಕಾರ್ಡ್‌ಗಳನ್ನು ಪಡೆದಿದ್ದರೂ ಈ ಆಧಾರ ಕಾರ್ಡ್‌ಗಳ ಮೂಲಕ ತಡೆಗಟ್ಟಲು ಸಹಕಾರಿಯಾಗಿದೆ. ನಿಟ್ಟಿನಲ್ಲಿ ಪ್ರತಿಯೊಬ್ಬರು ಆಧಾರ ಕಾರ್ಡ್‌ಗಳ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರಗಳ ಯೋಜನೆ ಅನುಷ್ಠಾನಕ್ಕೂ ಆಧಾರ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ವಿ ಸಾವಿತ್ರಿ  ಅವರು, ಭಾರತೀಯರ ಗುರುತಿಸಲು ಆಧಾರ ಕಾರ್ಡ್ ಸಹಕಾರಿಯಾಗಲಿದೆ ಎಂಬ ಉದ್ದೇಶವನ್ನು ಸರ್ಕಾರ ಹೊಂದಿದೆ. ಆಧಾರ ನೋಂದಣಿ ಮೂಲಕ ವಿಶಿಷ್ಟ ಸಂಖ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದರು.

ಪ್ರತಿಯೊಬ್ಬರು ಆಧಾರ ಕಾರ್ಡ್ ಪಡೆಯುವುದರ ಮೂಲಕ  ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದಾಗಿದೆ.ಆಧಾರ ನೋಂದಣಿಗೆ ನಿಗದಿಪಡಿಸಿ 20 ದಾಖಲೆಗಳೊಂದಾದರೂ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು. ಆಧಾರ ಸಂಚಾರಿ ತಂಡಗಳು ಶಾಲೆಗಳಿಗೆ ತೆರಳಿ ಶಾಲಾ ಮಕ್ಕಳ ಆಧಾರ ನೋಂದಣಿ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿ.ಎ ಮೂಲಿಮನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮಲಿಂಗರಾಜ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ತಿಮ್ಮಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ ಬಿಸ್ನಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜ್ಞಾನ ಪ್ರಕಾಶ ಹಾಗೂ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.