ADVERTISEMENT

ಫಲಿತಾಂಶದ ಬಳಿಕ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 5 ಜನವರಿ 2011, 10:05 IST
Last Updated 5 ಜನವರಿ 2011, 10:05 IST

ಹಟ್ಟಿ : ಜಿಪಂ-ತಾಪಂ ಚುನಾವಣೆ ಮತ ಎಣಿಕೆ ಬಳಿಕ ಮಂಗಳವಾರ ಸಂಜೆ ಲಿಂಗಸುಗೂರು ತಾಲ್ಲೂಕು ಹಟ್ಟಿ ಸಮೀಪದ ರಾಯದುರ್ಗ ಗ್ರಾಮದ ಹತ್ತಿರ ಕಾಂಗ್ರೆಸ್ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರು ಜೆಡಿಎಸ್ ಪಕ್ಷದ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಘಟನೆಯಲ್ಲಿ ಜೆಡಿಎಸ್ ಪಕ್ಷದ ರಾಯದುರ್ಗ ಗ್ರಾಮದ ಬಸವರಾಜ, ಪರಮಣ್ಣ, ನಿಂಗಪ್ಪ, ಲಕ್ಷ್ಮಣ, ಸಿದ್ಧಪ್ಪ ಎಂಬುವವರ ತಲೆಗೆ ಪೆಟ್ಟು ಬಿದ್ದಿದ್ದು, ಮಲ್ಲಪ್ಪ ಎಂಬುವವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ಅಲ್ಲದೇ ಮೂರ್ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಿಂಗಸುಗೂರಲ್ಲಿ ಮತ ಎಣಿಕೆ ಸಂದರ್ಭದಲ್ಲಿ ರಾಯದುರ್ಗ ತಾಪಂ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಪರಾಭವಗೊಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಜೆ ಗ್ರಾಮದ ಹತ್ತಿರ ವಾಹನದಲ್ಲಿ ತೆರಳುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಚುನಾವಣಾ ವೈಷಮ್ಯವೇ ಇದಕ್ಕೆ ಕಾರಣ ಎಂದು ಗಾಯಾಳುಗಳು ಹಟ್ಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.