ADVERTISEMENT

ಬಿಜೆಪಿ ಸೇರ್ಪಡೆ ಇಲ್ಲ: ಪ್ರತಾಪಗೌಡ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 9:05 IST
Last Updated 6 ಡಿಸೆಂಬರ್ 2017, 9:05 IST

ಮಸ್ಕಿ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ’ ಎಂದು ಶಾಸಕ ಪ್ರತಾಪಗೌಡ ಪಾಟೀಲ ತಿಳಿಸಿದರು.

ಪಟ್ಟಣದ ಶಾಸಕರ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಬಿಜೆಪಿ ಸೇರುತ್ತೇನೆ ಎಂಬುದು ಊಹಾಪೋಹ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಸೇರುವುದಿಲ್ಲ. ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದಲೇ ಸ್ಪರ್ಧಿಸುತ್ತೇನೆ’ ಎಂದು ಸ್ಪಷ್ಟಪಡಿಸಿದರು.

‘ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ. ಮುಂದಿನ ಚುನಾವಣೆಯಲ್ಲಿ ಅಭಿವೃದ್ಧಿ ಕಾರ್ಯ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ’ ಎಂದರು. ಮಸ್ಕಿ ಕ್ಷೇತ್ರದಲ್ಲಿ ಡಿ.16 ರಂದು ನಿಗದಿಪಡಿಸಲಾಗಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ’ ಎಂದು ತಿಳಿಸಿದರು.

ADVERTISEMENT

ಕಾಂಗ್ರೆಸ್ ಸೇರ್ಪಡೆ: ವಿವಿಧ ಗ್ರಾಮಗಳ ನೂರಾರು ಜನರು ಶಾಸಕ ಪ್ರತಾಪಗೌಡ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.