ADVERTISEMENT

ಭದ್ರತಾ ಸಿಬ್ಬಂದಿ ನೇಮಕಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2013, 5:12 IST
Last Updated 14 ಡಿಸೆಂಬರ್ 2013, 5:12 IST

ಮಸ್ಕಿ: ರಾಷ್ಟ್ರೀಕೃತ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ಬ್ಯಾಂಕ್‌ ಒಳಗಡೆ ಸಿಸಿ ಕ್ಯಾಮೆರಾ, ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಂಡು ಪೊಲೀಸ್‌ ಇಲಾಖೆಗೆ ವರದಿ ನೀಡುವಂತೆ ಮಸ್ಕಿ ಸಿಪಿಐ ಸತ್ಯನಾರಾಯಣರಾವ್‌ ಶುಕ್ರವಾರ ತಿಳಿಸಿದರು.

ಪಟ್ಟಣದ ಪೊಲೀಸ್‌ ವೃತ್ತ ಕಚೇರಿಯಲ್ಲಿ ಕರೆಯಲಾಗಿದ್ದ ವಿವಿಧ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಕೃತ ಬ್ಯಾಂಕ್‌ಗಳು ಎಟಿಎಂ ಕೇಂದ್ರದ ಒಳಗಡೆ ಹಾಗೂ ಹೊರಗಡೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು. ಕೇಂದ್ರದ ಭದ್ರತೆಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಹಕರ ಹಿತ ದೃಷ್ಟಿಯಿಂದ ಪೊಲೀಸ್‌ ಇಲಾಖೆ ಈ ಕ್ರಮ ಕೈಗೊಂಡಿದ್ದು, ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಿದರು. ಪಿಎಸ್‌ಐ ಗುರುರಾಜ ಕಟ್ಟಿಮನಿ, ಕೆನರಾ ಬ್ಯಾಂಕ್‌, ಸ್ಟೇಟ್‌ ಬ್ಯಾಂಕ್‌ ಆಪ್‌ ಇಂಡಿಯಾ, ಪ್ರಗತಿ ಗ್ರಾಮೀಣ ಬ್ಯಾಂಕ್‌ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ ಮತ್ತು ಖಾಸಗಿ ಹಣ­ಕಾಸು ಸಂಸ್ಥೆಗಳ ಮುಖ್ಯಸ್ಥರು, ಶಾಖಾ ವ್ಯವಸ್ಥಾಪಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.