ADVERTISEMENT

ಮಂತ್ರಾಲಯದಲ್ಲಿ ಚಿನ್ನದ ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 19:30 IST
Last Updated 4 ಆಗಸ್ಟ್ 2012, 19:30 IST
ಮಂತ್ರಾಲಯದಲ್ಲಿ ಚಿನ್ನದ ರಥೋತ್ಸವ ಸಂಭ್ರಮ
ಮಂತ್ರಾಲಯದಲ್ಲಿ ಚಿನ್ನದ ರಥೋತ್ಸವ ಸಂಭ್ರಮ   

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 341ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ದಿನವಾದ ಶನಿವಾರ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ನೆರವೇರಿಸಲಾಯಿತು.

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ರಾಘವೇಂದ್ರ ಸ್ವಾಮಿಗಳ ಬೃಂದಾವನದ ವಿಶೇಷ ಪೂಜೆ ಹಾಗೂ ರಾಯರ ದರ್ಶನವನ್ನು ಪಡೆದು ಪುನೀತಭಾವ ಹೊಂದಿದರು. ರಾಘವೇಂದ್ರ ಸ್ವಾಮಿಗಳ ಮಧ್ಯಾರಾಧನೆ ಅಂಗವಾಗಿ ಶ್ರೀಮಠದ ಪ್ರಕಾರದಲ್ಲಿ ಚಿನ್ನದ ರಥೋತ್ಸವವನ್ನು ಸಾವಿರಾರು ಭಕ್ತರು ವೀಕ್ಷಿಸಿದರು.

ಬೆಳಿಗ್ಗೆ ಆರಾಧನಾ ಮಹೋತ್ಸವ ಅಂಗವಾಗಿ ವಿವಿಧ ಪತ್ರಿಕೆಗಳು ಪ್ರಕಟಿಸಿದ ಪುರವಣಿಗಳನ್ನು ಪೀಠಾಧಿಪತಿ ಶ್ರೀ ಸುಯತೀಂದ್ರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದಿಂದ ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ರಾಜಾ ಎಸ್ ಗೋಪಾಲಾಚಾರ್ ಹಾಗೂ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸುಯಮೀಂದ್ರಾಚಾರ್ ಬಿಡುಗಡೆ ಮಾಡಿದರು. ಭಾನುವಾರ ಉತ್ತರಾಧನೆ ಅಂಗವಾಗಿ ಪ್ರಹ್ಲಾದ ರಥೋತ್ಸವ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.