ADVERTISEMENT

ಮಂತ್ರಾಲಯದಲ್ಲಿ ಮಧ್ವ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2019, 10:04 IST
Last Updated 14 ಫೆಬ್ರುವರಿ 2019, 10:04 IST
ಮಧ್ವನವಮಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪ್ರಾಕಾರದಲ್ಲಿ ಗುರುವಾರ ನಡೆದ ಮಧ್ವ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.
ಮಧ್ವನವಮಿ ನಿಮಿತ್ತ ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪ್ರಾಕಾರದಲ್ಲಿ ಗುರುವಾರ ನಡೆದ ಮಧ್ವ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.   

ರಾಯಚೂರು: ಮಧ್ವನವಮಿ ನಿಮಿತ್ತ ಮಂತ್ರಾಲಯದಲ್ಲಿ ಗುರುವಾರ ಪ್ರಾಣದೇವರಿಗೆ ವಿಶೇಷ ಪೂಜೆ, ಪುನಸ್ಕಾರಗಳನ್ನು ನೆರವೇರಿಸಲಾಯಿತು.

ಮಧುಅಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಮಾಡಲಾಯಿತು. ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳಾರತಿ ನೆರವೇರಿಸಿ ಮಧ್ವರ ರಥೋತ್ಸವಕ್ಕೆ ಚಾಲನೆ ನೀಡಿದರು.

ಮಠದ ಪ್ರಾಕಾರದಲ್ಲಿ ನಡೆದ ರಥೋತ್ಸವದಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು, ಭಕ್ತಿ ಸಮರ್ಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.