ADVERTISEMENT

ಮಿತಿ ಮೀರಿದ ಬಿಜೆಪಿ ದುರಾಡಳಿತ: ಬಾದರ್ಲಿ

​ಪ್ರಜಾವಾಣಿ ವಾರ್ತೆ
Published 13 ಜನವರಿ 2011, 8:35 IST
Last Updated 13 ಜನವರಿ 2011, 8:35 IST

ಸಿಂಧನೂರು: ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷದ ದುರಾಡಳಿತ ಮಿತಿ ಮೀರಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಟೀಕಿಸಿದರು.

ತಾಲ್ಲೂಕಿನ ಗಾಂಧಿನಗರದಲ್ಲಿ ಜಿಲ್ಲಾ ಪಂಚಾಯಿತಿ ಮತ್ತುತಾಲ್ಲೂಕು ಪಂಚಾಯಿತಿ ಕ್ಷೇತ್ರ ಗಳಲ್ಲಿ ವಿಜೇತರಾದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಂಗಳವಾರ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಭೂ ಹಗರಣ, ಗಣಿ ಹಗರಣ, ಲೈಂಗಿಕ ಹಗರಣ ಹೀಗೆ ಬಿಜೆಪಿ ಸರ್ಕಾರದ ಹಗರಣಗಳ ಪಟ್ಟಿ ಬೆಳೆಯುತ್ತಿದೆ. ಜನಸಾಮಾನ್ಯರು ಮಾತ್ರ ಮೂಲ ಸೌಕರ್ಯಗಳ ಕೊರೆತೆಯಿಂದ ಪರಿತಪಿಸುತ್ತಿದ್ದಾರೆ. ರಾಜ್ಯದಲ್ಲಿ ಹಿಂದೆಂದೂ ಇಂತಹ ಕೆಟ್ಟ ಸರ್ಕಾರ ಬಂದಿದ್ದಿಲ್ಲ ಎಂದು ಕಿಡಿಕಾರಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡದೆ ಮತದಾರರು ಸರಿಯಾದ ಪಾಠ ಕಲಿಸಿದ್ದಾರೆ. ಶೀಘ್ರ ಸರ್ಕಾರ ಪತನವಾಗಲಿದ್ದು ಕಾಂಗ್ರೆಸ್‌ಗೆ ಬಹುಮತ ದೊರೆತು ಜನಪರ ಸರ್ಕಾರ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಾಲಿಹಾಳ ಜಿಲ್ಲಾ ಪಂಚಾಯಿತಿ ಕ್ಷೇತ್ರದ ನೂತನ ಸದಸ್ಯೆ ಲಲಿತಮ್ಮ ಲಿಂಗರಾಜ ಪಾಟೀಲ್ ಮಾತನಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ಲಿಂಗರಾಜ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.