ADVERTISEMENT

ರಂಗೋಲಿ ಸ್ಪರ್ಧೆ: ಮತದಾನ ಜಾಗೃತಿ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 13:08 IST
Last Updated 28 ಏಪ್ರಿಲ್ 2018, 13:08 IST
ವಿಧಾನಸಭೆ ಚುನಾವಣೆ ಪ್ರಯುಕ್ತ ರಾಯಚೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಬಿಡಿಸಿರುವ ರಂಗೋಲಿ
ವಿಧಾನಸಭೆ ಚುನಾವಣೆ ಪ್ರಯುಕ್ತ ರಾಯಚೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಬಿಡಿಸಿರುವ ರಂಗೋಲಿ   

ರಾಯಚೂರು: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ವಿವಿಧ ಇಲಾಖೆಗಳ ವಸತಿ ನಿಲಯದ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ನಡೆಯಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ರಂಗೋಲಿ ಬಿಡಿಸುವ ಮೂಲಕ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಮೇ 12ರಂದು ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಜಾಗೃತಿ ಮೂಡಿಸಲಾಯಿತು. ರಂಗೋಲಿ ಸ್ಪರ್ಧೆ ವಿಜೇತರಿಗೆ  ಬಹುಮಾನ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ಸರೋಜಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧಿಕಾರಿ ಎಂ.ಎಸ್.ಗೋನಾಳ್, ಪ್ರಶಾಂತ, ಅಲ್ಪಸಂಖ್ಯಾತರ ಇಲಾಖೆ ರಾಜು, ರಾಜೇಂದ್ರ ಜಲ್ದಾರ್, ದಂಡಪ್ಪ ಬಿರಾದಾರ, ವ್ಯಂಗ್ಯ ಚಿತ್ರಗಾರ ಈರಣ್ಣ ಬೆಂಗಾಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.