ADVERTISEMENT

`ರೈತ ಸಮುದಾಯಕ್ಕೆ ಗೌರವ ತರುವ ಹಬ್ಬ'

​ಪ್ರಜಾವಾಣಿ ವಾರ್ತೆ
Published 24 ಜೂನ್ 2013, 9:51 IST
Last Updated 24 ಜೂನ್ 2013, 9:51 IST

ರಾಯಚೂರು: ಮುಂಗಾರು ಮಳೆ ಆರಂಭಗೊಂಡ ಬಳಿಕವೇ ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬವು ಕೃಷಿ ಹಬ್ಬವಾಗಿದೆ. ಈ ಹಬ್ಬದ ಆಚರಣೆಯಿಂದ ರೈತ ಸಮುದಾಯಕ್ಕೆ ಗೌರವ ತರುವಂಥ ಹಬ್ಬದ ಆಚರಣೆಯಾಗಿದೆ ಎಂದು  ಕೃಷಿ ಸಚಿವ ಕೃಷ್ಣಬೇರೈಗೌಡ ಅವರು ಹೇಳಿದರು.

ಇಲ್ಲಿನ ರಾಜೇಂದ್ರ ಗಂಜ್ ಆವರಣದಲ್ಲಿ ಮುನ್ನೂರು ಕಾಪು ಬಲಿಜ ಸಮಾಜ, ಹಟ್ಟಿ ಚಿನ್ನದ ಗಣಿ, ನಗರಸಭೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನಡೆದ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಕಾರ್ಯಕ್ರಮ ಅಂಗವಾಗಿ ಎತ್ತುಗಳಿಂದ ಎರಡು ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆಯನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ  ಮಾತನಾಡಿದರು.

ಕೃಷಿಕ ಸಮಾಜದಲ್ಲಿ ಹುಟ್ಟಿದವರು ಕೃಷಿಯನ್ನು ಮಾಡದೇ ಉದ್ಯೋಗ ಹುಡುಕಿಕೊಂಡು ಪಟ್ಟಣಗಳಿಗೆ ಸೇರುತ್ತಿದ್ದಾರೆ. ಆಹಾರ ಉತ್ಪಾದನೆ ಕಡಿಮೆಯಾದರೆ ಆಹಾರ ಭದ್ರತೆಗೆಯೂ ಸಮಸ್ಯೆಯಾಗುತ್ತದೆ. ಮುಂದೆ ದೇಶಕ್ಕೆ ಕಂಟಕ ಎದುರಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಸಾನ್ನಿಧ್ಯವನ್ನು ಮುನ್ನೂರು ಕಾಪು ಸಮಾಜದ ಶೂನ್ಯ ಸಿಂಹಾಸನ ಪೀಠದ ಸದ್ಗುರು ಶರಣ ತಿಪ್ಪೇಶ್ವರ ಸ್ವಾಮೀಜಿ, ಚಿಕ್ಕಸುಗೂರಿನ ಚೌಕಿ ಮಠದ ಡಾ.ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು.ಅಧ್ಯಕ್ಷತೆಯನ್ನು ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ವಹಿಸಿದ್ದರು.

ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣ ಪ್ರಕಾಶ ಪಾಟೀಲ್.ಶಾಸಕರಾದ ಹಂಪನಗೌಡ ಬಾದರ್ಲಿ, ಜಿ.ಹಂಪಯ್ಯ ನಾಯಕ, ಪ್ರತಾಪಗೌಡ ಪಾಟೀಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ಎಸ್ ಬೋಸರಾಜ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ವಸಂತಕುಮಾರ ಹಾಗೂ ಮತ್ತಿತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.