ADVERTISEMENT

ಲಿಂಗಾವಧೂತರ ಸಂಭ್ರಮದ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2011, 6:20 IST
Last Updated 2 ಆಗಸ್ಟ್ 2011, 6:20 IST
ಲಿಂಗಾವಧೂತರ ಸಂಭ್ರಮದ ರಥೋತ್ಸವ
ಲಿಂಗಾವಧೂತರ ಸಂಭ್ರಮದ ರಥೋತ್ಸವ   

ಹಟ್ಟಿ ಚಿನ್ನದ ಗಣಿ: ಸ್ಥಳೀಯ ಶ್ರೀ ಲಿಂಗಾವಧೂತ ದೇವಸ್ಥಾನದ ರಥೋತ್ಸವ ಭಾನುವಾರ ವಿಜೃಂಭಣೆಯಿಂದ  ಜರುಗಿತು.

ಈ ಜಾತ್ರೆಗೆ ಹಟ್ಟಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲದೇ ಪಕ್ಕದ ತಾಲ್ಲೂಕು ಮತ್ತು ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ತಮ್ಮ ಹರಕೆಯನ್ನು ತೀರಿಸುತ್ತಾರೆ. ಇಲ್ಲಿ ಶ್ರಾವಣ ಮತ್ತು ಫಾಲ್ಗುಣ ಮಾಸದಲ್ಲಿ ಜಾತ್ರೆ ನಡೆಯುವುದು ವಿಷೇಶ. 

ಊರಿನ ಹಿರಿಯರು ಮತ್ತು ಲಿಂಗಾವಧೂತರ ಶಾಂತಿಧಾಮ ದೇವಸ್ಥಾನ ಸಮಿತಿಯ ಅಧ್ಯಕ್ಷ ಗುಂಡಪ್ಪ ಗೌಡ ಪೊಲೀಸ್ ಪಾಟೀಲ್ ಇವರ ನೇತೃತ್ವದಲ್ಲಿ ರಥೋತ್ಸವ ಸೇರಿದಂತೆ ಬೇರೆ ಬೇರೆ ಕಾರ್ಯಕ್ರಮಗಳು ನಡೆದವು.

ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಮತ್ತು ಊರಿನ ಹಿರಿಯರು ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ನೇತೃತ್ವದಲ್ಲಿ ಬಾಜಾ ಭಜಂತ್ರಿಯೊಂದಿಗೆ ಮೆರವಣಿಗೆಯಲ್ಲಿ  ಕಳಸವನ್ನು ತರಲಾಗುತ್ತದೆ. ಪೂಜೆ ಸಲ್ಲಿಸಿ ರಥೋತ್ಸವ ಹಮ್ಮಿಕೊಳ್ಳಲಾಗುತ್ತದೆ.

ರಥೋತ್ಸವದಲ್ಲಿ ಚ್ನಿನದ ಗಣಿಯ ಅಧಿಕಾರಿಗಳು, ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರು, ಊರಿನ ಗಣ್ಯರು ಸೇರಿದಂತೆ ಸಾವಿರಾರು ಜನ ಭಕ್ತರು ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.