ರಾಯಚೂರು: ಶಿಕ್ಷಣದಿಂದ ವ್ಯಕ್ತಿತ್ವ ವಿಕಾಸ ಮತ್ತು ಸಮಾಜ ಸುಧಾರಣೆ ಸಾಧ್ಯವಾಗಲಿದ್ದು, ಶಿಕ್ಷಣ ಪಡೆಯುವ ಬಗ್ಗೆ ಜಾಗೃತಿ ಹಾಗೂ ಈ ಕುರಿತ ಸುಧಾರಣಾ ಕ್ರಮಗಳ ಕುರಿತು ಪತ್ರಿಕಾ ರಂಗ ಆದ್ಯತೆಯನುಸಾರ ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ಬೆಂಗಳೂರಿನ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಎನ್.ಎಸ್ ಅಶೋಕಕುಮಾರ ಹೇಳಿದರು.
ಭಾನುವಾರ ಇಲ್ಲಿನ ವೀರಶೈವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಆಶ್ರಯದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಹಾಗೂ ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದರು.
ಪತ್ರಿಕಾರಂಗಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ. ಅನೇಕ ಸಂಕಷ್ಟಗಳು ಎದುರಾದರೂ ರಾಜ್ಯದ ಪತ್ರಿಕೆಗಳು ಬದ್ಧತೆ ಮೆರೆದಿವೆ ಎಂದರು.
ಶಾಸಕರಾದ ಎ. ವೆಂಕಟೇಶ ನಾಯಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ಲಿಂಗರಾಜು, ಶಾಸಕ ತಿಪ್ಪರಾಜು ಹವಾಲ್ದಾರ, ಶಾಸಕ ಶಿವರಾಜ ಪಾಟೀಲ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಟಿ.ಜ್ಞಾನ ಪ್ರಕಾಶ ಮಾತನಾಡಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚನ್ನಬಸವಣ್ಣ ವಹಿಸಿದ್ದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಎನ್.ಶಂಕರಪ್ಪ, ಶಾಸಕ ಪ್ರತಾಪಗೌಡ ಪಾಟೀಲ್, ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಅಧ್ಯಕ್ಷ ಸುರೇಂದ್ರಾಚಾರ್ ಕೊರ್ತಕುಂದಾ, ಗೌರವ ಅಧ್ಯಕ್ಷ ಕೆ.ರಾಮಕೃಷ್ಣ, ಪ್ರಧಾನ ಕಾರ್ಯದರ್ಶಿಗಳಾದ ಕೆ. ಸತ್ಯನಾರಾಯಣ, ಎಚ್.ವೀರನಗೌಡ, ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಮೃತುಂಜಯ ಕಪಗಲ್, ಬಿ. ವೆಂಕಟಸಿಂಗ್, ಸಿದ್ದು ಬಿರಾದಾರ್ ಹಾಗೂ ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.