ಮಸ್ಕಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಕಳೆದ ಮೂರು ವರ್ಷಗಳಿಂದ ಶೌಚಾಲಯ ಇಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಪ್ರಮುಖ ವ್ಯಾಪಾರ ಹಾಗೂ ವಾಣಿಜ್ಯ ಕೇಂದ್ರವಾಗಿರುವ ಇಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚು. ಪ್ರತಿನಿತ್ಯ ನೂರಾರು ಬಸ್‌ಗಳು ಇಲ್ಲಿನ ಬಸ್ ನಿಲ್ದಾಣಕ್ಕೆ ಬಂದು ಹೋಗುತ್ತಿವೆ.
ಇಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ದಿನ ನಿತ್ಯ ಪರಡಾಡುವಂತಾಗಿದೆ. ನೂತನ ಶೌಚಾಲಯ ನಿರ್ಮಿಸುವ ಉದ್ದೇಶದಿಂದ ಹಳೆ ಶೌಚಾಲಯವನ್ನು ನೆಲಸಮ ಮಾಡಲಾಗಿತ್ತು. ಮೂರು ವರ್ಷ ಕಳೆದರೂ ಇನ್ನೂ ನಿರ್ಮಿಸದಿರುವುದು ಪ್ರಯಾಣಿಕರ ಅಕ್ರೋಶಕ್ಕೆ ಕಾರಣವಾಗಿದೆ.
ಮಸ್ಕಿ ಬಸ್ ನಿಲ್ದಾಣದಲ್ಲಿ 15 ಲಕ್ಷ ವೆಚ್ಚದಲ್ಲಿ ಮಹಿಳಾ ಹಾಗೂ ಪುರುಷ ಶೌಚಾಲಯ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ, ಶೀಘ್ರದಲ್ಲಿಯೇ ಈಶಾನ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕರ ಒಪ್ಪಿಗೆ ಪಡೆದು ಶೌಚಾಲಯ ನಿರ್ಮಿಸಲಾಗುವುದು ಎಂದು ಸಂಸ್ಥೆಯ ಎಂಜಿನಿಯರ್ ಅಣ್ಣಪ್ಪ ತಿಳಿಸಿದ್ದಾರೆ. ಮೂರು ವರ್ಷಗಳಿಂದ ಪ್ರಯಾಣಿಕರು ನಿಲ್ದಾಣದ ಒಳಗಡೆ ಇರುವ ಜಾಲಿಮರಗಳನ್ನೇ ಶೌಚಾಲಯಗಳನ್ನಾಗಿ ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.