ADVERTISEMENT

ಸರ್ಕಾರದ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2011, 8:20 IST
Last Updated 3 ಅಕ್ಟೋಬರ್ 2011, 8:20 IST

ಮಾನ್ವಿ: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಹಿತದೃಷ್ಟಿಯಿಂದ ಸರ್ಕಾರ ಜಾರಿಗೆ ತರುವ ಯೋಜನೆಗಳು ಸದ್ಬಳಕೆಯಾಗಬೇಕು ಎಂದು ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳು ಸೈಕಲ್‌ಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

 ಪುರಸಭೆ ಮಾಜಿ ಅಧ್ಯಕ್ಷ ಗಫೂರ್‌ಸಾಬ, ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೈಯದ್ ಇಲಿಯಾಸ್ ಖಾದ್ರಿ, ಜಿಲ್ಲಾ ಪಂಚಾಯಿತಿ ಸದಸ್ಯ ಹನುಮೇಶ ಮದ್ಲಾಪುರ, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಾ ವಸಂತ ನಾಯಕ, ಪುರಸಭೆ ಉಪಾಧ್ಯಕ್ಷ ಹುಸೇನ್‌ಬೇಗ್, ಸದಸ್ಯರಾದ ಆಶಾಬಾನು, ಮಹಿಬೂಬ್ ಖುರೇಷಿ, ಸಮದಾನಿ ನಾಯ್ಕ, ಎಸ್‌ಡಿಎಂಸಿ ಉಪಾಧ್ಯಕ್ಷ ಜಮೀಲ್ ಅಹ್ಮದ್, ಎಂ.ಎಂ.ಖಾನ್, ನಿಜಾಮ್‌ಪಾಷ, ಶಾಲೆಯ ಮುಖ್ಯ ಗುರು ಶೇಖ್ ಮಹ್ಮದ್ ರಫಿ ಇದ್ದರು. ಶಿಕ್ಷಕ ಸೈಯದ್ ಇಸ್ಮಾಯಿಲ್ ಖಾದ್ರಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.