ADVERTISEMENT

‘ರಾಜ್ಯದಲ್ಲಿ ಬಿಜೆಪಿ ಅಲೆ: ಕೆ. ವಿರೂಪಾಕ್ಷಪ್ಪ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2014, 12:22 IST
Last Updated 23 ಮಾರ್ಚ್ 2014, 12:22 IST

ಮಸ್ಕಿ: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು  20 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಸಂಸದ, ಬಿಜೆಪಿ ಹಿರಿಯ ಮುಖಂಡ ಕೆ. ವಿರೂಪಾಕ್ಷಪ್ಪ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನರೇಂದ್ರಮೋದಿ ಈ ದೇಶದ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಆಸೆ. ಮೋದಿ ಅಲೆ ರಾಷ್ಟ್ರದ ಎಲ್ಲೇಡೆ ಬಿಸುತ್ತಿದೆ. ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.

24 ರಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ನಾಮಪತ್ರ ಸಲ್ಲಿಸಲಿದ್ದಾರೆ. 26 ರಂದು ಸಂಜೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಮಸ್ಕಿ ಪಟ್ಟಣಕ್ಕೆ ಬರಲಿದ್ದು, ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ರಾಜಶೇಖರಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಸದಸ್ಯ ಮಹಾದೇವಪ್ಪಗೌಡ ಪೊಲೀಸ್‌ಪಾಟೀಲ, ವೆಂಕನಗೌಡ ಮಲ್ಕಾಪುರ, ಬಸ್ಸಣ್ಣ ತೊಂತನಾಳ, ಕೊಲ್ಲಿ ಶೇಷಗಿರಿರಾವ್‌, ಆರ್‌. ಬಸನಗೌಡ ತುರ್ವಿಹಾಳ, ಬಿಜೆಪಿ ಮಸ್ಕಿ ಮಂಡಲ ಅಧ್ಯಕ್ಷ  ಸಂಗಮೇಶ ಹತ್ತಿಗುಡ್ಡಿ, ಸಿಂಧನೂರು ಮಂಡಲ ಅಧ್ಯಕ್ಷ ದೇವೆಂದ್ರಪ್ಪ ಯಾಪಲಪರ್ವಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅಂಕುಶದೊಡ್ಡಿ ಇದ್ದರು.

ಸೇರ್ಪಡೆ ಸುಳ್ಳು: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದೇನೆ ಎಂದು ಕೆಲವರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮಹಾದೇವಪ್ಪಗೌಡ ಪೊಲೀಸ್‌ಪಾಟೀಲ ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಬಸವರಾಜಪ್ಪ ಹಿಟ್ನಾಳ ಕರೆ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದ್ದರು. ಆದರೆ, ನಾನು ಬಿಜೆಪಿಯಲ್ಲಿ ಇದ್ದುದ್ದರಿಂದ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದೇನೆ. ಯಾವದೇ ಕಾರಣಕ್ಕೂ ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.