ADVERTISEMENT

‘ಲಿಂಗಸುಗೂರ ಕ್ರೀಡಾಪಟುಗಳ ತವರೂರು’

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2013, 8:54 IST
Last Updated 12 ಸೆಪ್ಟೆಂಬರ್ 2013, 8:54 IST

ಲಿಂಗಸುಗೂರು: ‘ತಾಲ್ಲೂಕಿನ ಪ್ರಾಥಮಿಕ ಶಾಲೆಯಿಂದ ಹಿಡಿದು ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ವಿವಿಧ ಹಂತದ ಕ್ರೀಡಾಕೂಟಗಳಲ್ಲಿ ದಾಖಲೆ ನಿರ್ಮಿಸಿದ್ದಾರೆ. ಲಿಂಗಸುಗೂರ ಕ್ರೀಡಾಪಟುಗಳನ್ನು ತಯಾರಿಸುವ ಕೇಂದ್ರವಾಗಿದೆ’ ಎಂದು ಶಾಸಕ ಮಾನಪ್ಪ ವಜ್ಜಲ ಹೇಳಿದರು.

ಬುಧವಾರ ಆಯೋಜಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಉಪವಿಭಾಗಾಧಿಕಾರಿ ಟಿ.ಯೋಗೇಶ ಕ್ರೀಡಾಜ್ಯೋತಿ ಸ್ವೀಕರಿಸಿದರು, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಪ್ರಭುಲಿಂಗ ಗದ್ದಿ ಮಾತನಾಡಿದರು.

ಶಾಲಾ ಸುಧಾರಣ ಸಮಿತಿ ಅಧ್ಯಕ್ಷ ಜಯಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪಾಧ್ಯಕ್ಷ ಎಸ್.ಆರ್.ರಸೂಲ, ಕ್ಷೇತ್ರ ಶಿಕ್ಷಣಾಧಿಕಾರಿ ಅಮರೇಶ ಭೋವಿ, ಶಾಲಾ ಮುಖ್ಯೋಪಾಧ್ಯಾಯ ಪಂಚಾಕ್ಷರಯ್ಯ, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಮೂಲಿಮನಿ. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಭೀಮಣ್ಣ ನಾಯಕ. ಶಿಕ್ಷಣ ಇಲಾಖೆ ನೌಕರರ ವಿವಿಧ ಸಂಘಟನೆಗಳ ಪದಾಧಿಕಾರಿಗಳಾದ ಗದ್ದೆಪ್ಪ ಈಚನಾಳ, ರಾಮನಗೌಡ ಮೇಟಿ, ಸಿದ್ರಾಮಪ್ಪ, ಶಿವಯೋಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.