ADVERTISEMENT

‘ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ಧರಣಿ’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2013, 6:31 IST
Last Updated 14 ಸೆಪ್ಟೆಂಬರ್ 2013, 6:31 IST

ರಾಯಚೂರು: ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ವರದಿ ಮುಖ್ಯಮಂತ್ರಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು, ಹತ್ತುವರೆ ಸಾವಿರ ಗ್ರಾಮ ಸಹಾಯಕರನ್ನು ‘ಡಿ’ಗ್ರೂಪ್‌ ನೌಕರರೆಂದು ಪರಿಗಣಿಸಬೇಕು,
ಪೌರಕಾರ್ಮಿಕ ಗುತ್ತಿಗೆ ಪದ್ಧತಿ ರದ್ದುಪಡಿಸಬೇಕು ಎಂಬುದು ಸೇರಿದಂತೆ ಹಲವು ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ  ಸೆಪ್ಟೆಂಬರ್ 16ರಂದು ರಾಜ್ಯವ್ಯಾಪಿ ಎಲ್ಲ ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಲಾಗುತ್ತಿದೆ ಎಂದು ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ವಿಭಾಗೀಯ ಅಧ್ಯಕ್ಷ ಕೆ.ಎಸ್‌ ನಾಗರಾಜ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೌರಕಾರ್ಮಿಕರ ಸೇವೆ ಕಾಯಂಗೊಳಿಸಬೇಕು, ಎಲ್ಲ ಇಲಾಖೆಗಳಲ್ಲಿ ದಿನಗೂಲಿ, ಸಫಾಯಿ ಕರ್ಮಚಾರಿ, ಅರೆಕಾಲಿಕ ನೌಕರರನ್ನು ಕಾಯಂಗೊಳಿಸಬೇಕು, ಚರ್ಮ ಕುಶಲಕರ್ಮಿ ಕೆಲಸಗಾರರಿಗೆ ವಿಶೇಷ ಸಾಲ ಸೌಲಭ್ಯ ಒದಗಿಸಬೇಕು ಎಂಬುವ ಪ್ರಮುಖ ಬೇಡಿಕೆಗಳಾಗಿವೆ ಎಂದರು.

ಸಂಘಟನೆಯ ಮಾನಪ್ಪ ಮೇಸ್ತ್ರಿ,ರಾಘವೇಂದ್ರ ಬೊರೆಡ್ಡಿ,ನರಸಿಂಹಲು ಗುಡದಿನ್ನಿ, ಅರಳಪ್ಪ, ಶರಣಪ್ಪ ಮ್ಯಾತ್ರಿ, ಆಂಜನೇಯ, ಆರೋಗ್ಯಪ್ಪ, ನಾಗಪ್ಪ ಕಟ್ಟೀಮನಿ, ಶಿವರಾಜ ಪತ್ರಿಕಾಗೋಷ್ಠಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.