ರಾಯಚೂರು: ‘ಅಮೃತ ಭಾರತ ಯೋಜನೆಯಡಿ ಕೇಂದ್ರ ರೈಲ್ವೆ ಇಲಾಖೆಯಿಂದ ರಾಯಚೂರು ರೈಲು ನಿಲ್ದಾಣದ ಅಭಿವೃದ್ಧಿಗೆ ₹11.80 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ರೈಲ್ವೆ ಸಲಹಾ ಸಮಿತಿ ಸದಸ್ಯ ಬಾಬುರಾವ್ ತಿಳಿಸಿದ್ದಾರೆ.
ಗುಂತಕಲ್ ವಿಭಾಗದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾಗಿರುವ ರಾಯಚೂರು ರೈಲು ನಿಲ್ದಾಣದ ಅಭಿವೃದ್ಧಿಗೆ ಆದ್ಯತೆ ಕೊಡಲಾಗಿದೆ. ಈ ಯೋಜನೆಯಡಿ ರೈಲು ನಿಲ್ದಾಣದ ಮುಂಭಾಗ ಮತ್ತು ಪ್ರವೇಶದ್ವಾರಗಳ ಸುಧಾರಣೆ, ಫ್ಲಾಟ್ ಫಾರಂಗಳ ವಿಸ್ತರಣೆ, ಪಾರ್ಕಿಂಗ್ ಸೌಲಭ್ಯ, ಪ್ರವೇಶ ಕಮಾನು ನಿರ್ಮಾಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಯಾದಗಿರಿ ಜಿಲ್ಲಾ ಕೇಂದ್ರ ರೈಲು ನಿಲ್ದಾಣವೂ ಅಮೃತ್ ನಿಲ್ದಾಣ ಯೋಜನೆಯಡಿ ಗುರುತಿಸಿಕೊಂಡಿದ್ದು, ₹6.55 ಕೋಟಿ ಅಂದಾಜು ವೆಚ್ಚದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಯಾದಗಿರಿ ರೈಲು ನಿಲ್ದಾಣದ ಅಭಿವೃದ್ಧಿಯನ್ನೂ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.