ಆಲಮಟ್ಟಿ ಜಲಾಶಯದ ಬಲಭಾಗದ ವಿದ್ಯುತ್ ಉತ್ಪಾದನಾ ಕೇಂದ್ರದ (ಕೆಪಿಸಿಎಲ್) ಮೂಲಕ ಹರಿಯುತ್ತಿರುವ ಕೃಷ್ಣಾ ನದಿ ನೀರು
– ಪ್ರಜಾವಾಣಿ ಚಿತ್ರ: ಚಂದ್ರಶೇಖರ ಕೋಳೆಕರ
ಲಿಂಗಸುಗೂರು: ಸಮೀಪದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಸೋಮವಾರ 11,350 ಕ್ಯೂಸೆಕ್ ನೀರು ಹರಿಸಲಾಯಿತು.
ಎರಡು ದಿನಗಳಿಂದ ಒಳಹರಿವು ಹೆಚ್ಚಿದ ಕಾರಣ ಭಾನುವಾರ 45 ಸಾವಿರ ಕ್ಯೂಸೆಕ್ ನೀರು ಹರಿಸಲಾಗಿತ್ತು. ಸೋಮವಾರ ಒಳಹರಿವು 15 ಸಾವಿರ ಕ್ಯೂಸೆಕ್ ಇತ್ತು. ಆದ್ದರಿಂದ ಹೊರಹರಿವು ಕಡಿಮೆಗೊಳಿಸಲಾಗಿದೆ.
ಜಲಾಶಯದ ಎರಡು ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಹರಿಸಲಾಗುತ್ತಿದೆ. ಜಲಾಶಯದಲ್ಲಿ ಪ್ರಸ್ತುತ 25.77 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.