ADVERTISEMENT

ರಾಯಚೂರಿನಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 7:31 IST
Last Updated 1 ಆಗಸ್ಟ್ 2023, 7:31 IST
 ದಲಿತ ಸಾಹಿತ್ಯ ಸಮ್ಮೇಳನ
ದಲಿತ ಸಾಹಿತ್ಯ ಸಮ್ಮೇಳನ   

ವಿಜಯಪುರ: ‘2024ರ ಜನವರಿಯಲ್ಲಿ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನ ರಾಯಚೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ’ ಎಂದು ದಲಿತ ಸಾಹಿತ್ಯ ಪರಿಷತ್‌ ರಾಜ್ಯ ಘಟಕದ ಅಧ್ಯಕ್ಷ ಅರ್ಜುನ ಗೊಳಸಂಗಿ ತಿಳಿಸಿದ್ದಾರೆ.

‘ವಿಜಯಪುರದಲ್ಲಿ ಎರಡು ದಿನ ನಡೆದ 10ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ 5 ಪ್ರಮುಖ ನಿರ್ಣಯಗಳನ್ನು ಈಡೇರಿಸುವಂತೆ ಶೀಘ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿಯಾಗಿ, ಸಮ್ಮೇಳನಕ್ಕೆ ಸರ್ಕಾರದಿಂದ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT