ADVERTISEMENT

12 ಮಕ್ಕಳ ರಕ್ಷಣೆ, ಎರಡು ವಾಹನಗಳ ಜಪ್ತಿ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 14:39 IST
Last Updated 5 ಸೆಪ್ಟೆಂಬರ್ 2020, 14:39 IST

ರಾಯಚೂರು: ಜಿಲ್ಲಾ ಬಾಲಕಾರ್ಮಿಕ ಯೋಜನೆ, ತಾಲ್ಲೂಕು ಆಡಳಿತ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ಸಹಾಯವಾಣಿ ಮತ್ತು ಮಕ್ಕಳ ರಕ್ಷಣಾ ಘಟಕದಿಂದ ತಾಲ್ಲೂಕಿನ ಗಿಲ್ಲೇಸೂಗೂರು, ಮಟಮಾರಿ, ಗಾಣದಾಳ, ಗುಂಜಳ್ಳಿ, ಇಡಪನೂರು ಮತ್ತು ಯರಗೇರಾ ವ್ಯಾಪ್ತಿಯಲ್ಲಿ ಬಾಲ ಕಾರ್ಮಿಕರು ಕೆಲಸ ಮಾಡುತ್ತಿದ್ದ ಪ್ರದೇಶಗಳ ಮೇಲೆ ಶನಿವಾರ ಹಠಾತ್ ದಾಳಿ ನಡೆಸಲಾಯಿತು.

ಕೃಷಿ ಚಟುವಟಿಕೆಗಳಿಗಾಗಿ ಮಕ್ಕಳನ್ನು ಕಾನೂನು ಬಾಹಿರವಾಗಿ ಗೂಡ್ಸ್ ವಾಹನಗಳಲ್ಲಿ ಸಾಗಾಣಿಕೆ ಮಾಡುತ್ತಿದ್ದ ಎರಡು ವಾಹನಗಳನ್ನು ಜಪ್ತಿ ಮಾಡಿ ಯರಗೇರಾ ಪೊಲೀಸ್ ಠಾಣೆಯಲ್ಲಿ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೆಲಸಕ್ಕಾಗಿ ಸಾಗಾಣಿಕೆ ಮಾಡುತ್ತಿದ್ದ 12 ಮಕ್ಕಳನ್ನು ರಕ್ಷಣೆ ಮತ್ತು ಪೋಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಲಾಗಿದೆ. ಅಧಿಕಾರಿಗಳಾದ ವಿಶಾಲ್ ಪವಾರ್, ಮನ್ಸೂರ್ ಅಹ್ಮದ್, ಗೋಕುಲ್, ರಾಮಕೃಷ್ಣ, ಲಕ್ಷ್ಮೀಕುಮಾರ, ಅನ್ವರ್‍ಅಲಿ, ಹನುಮೇಶ, ತಾಯರಾಜ್, ಮುಕ್ಕಣ್ಣ, ಮಹೇಶ, ಈರಣ್ಣ, ರವಿಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT