ADVERTISEMENT

ಕೋವಿಡ್ ಆರೈಕೆ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 14:07 IST
Last Updated 10 ಮೇ 2021, 14:07 IST
ರಾಯಚೂರಿನಲ್ಲಿ ಸೇವಾ ಭಾರತಿ ಹಾಗೂ ಸ್ವಾಮಿ ವಿವೇಕಾನಂದ ಸಮಗ್ರ ಆರೋಗ್ಯ ಕೇಂದ್ರ, ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕೋವಿಡ್ ಆರೈಕೆ ಮತ್ತು ಪ್ರತ್ಯೇಕ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ ಪಾಟೀಲ ಮಾತನಾಡಿದರು
ರಾಯಚೂರಿನಲ್ಲಿ ಸೇವಾ ಭಾರತಿ ಹಾಗೂ ಸ್ವಾಮಿ ವಿವೇಕಾನಂದ ಸಮಗ್ರ ಆರೋಗ್ಯ ಕೇಂದ್ರ, ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕೋವಿಡ್ ಆರೈಕೆ ಮತ್ತು ಪ್ರತ್ಯೇಕ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ ಪಾಟೀಲ ಮಾತನಾಡಿದರು   

ರಾಯಚೂರು: ಕೋವಿಡ್ ಹರಡುವುದನ್ನು ತಡೆಗಟ್ಟಲು ಪ್ರತ್ಯೇಕ ಕೇಂದ್ರಗಳನ್ನು ನಿರ್ಮಿಸುವ ಅವಶ್ಯಕತೆ ಇದೆ. ನಗರ ಮತ್ತು ಜಿಲ್ಲೆಯ ಜನತೆ ಸೇವಾ ಭಾರತಿಯ ಈ ಸೇವೆಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಡಾ. ಶಿವರಾಜ ಪಾಟೀಲ ಹೇಳಿದರು.

ಸೇವಾ ಭಾರತಿ ಹಾಗೂ ಸ್ವಾಮಿ ವಿವೇಕಾನಂದ ಸಮಗ್ರ ಆರೋಗ್ಯ ಕೇಂದ್ರ, ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಗರದ 120 ಹಾಸಿಗೆಯ ಕೋವಿಡ್ ಆರೈಕೆ ಮತ್ತು ಪ್ರತ್ಯೇಕ ಕೇಂದ್ರದ ಉದ್ಘಾಟನೆಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ರಾಮಕೃಷ್ಣ ಮಾತನಾಡಿ, ಇಂಥ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಸೇವಾ ಭಾರತಿಯ ನಿಸ್ವಾರ್ಥ ಸೇವೆ ಶ್ಲಾಘನೀಯ. ಈ ಕಾರ್ಯಕ್ಕೆ ಸ್ಥಳೀಯ ಮಟ್ಟದಲ್ಲಿ ಎಲ್ಲ ರೀತಿಯ ಸಹಕಾರ ನೀಡುವುದು ಎಂದು ಹೇಳಿದರು.

ADVERTISEMENT

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಳ್ಳಾರಿ ವಿಭಾಗದ ಪ್ರಚಾರಕ ಸತೀಶ್ ಕುಮಾರ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಕಾರ್ಯದರ್ಶಿ ಡಾ. ನಾಗರಾಜ ಭಾಲ್ಕಿ, ಶಿಲ್ಪಾ ಮೆಡಿಕೇರ್ ವ್ಯವಸ್ಥಾಪಕ ನಿರ್ದೇಶಕ ವಿಷ್ಣ್ಣುಕಾಂತ ಬುತಡಾ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಸದಸ್ಯ ತ್ರಿವಿಕ್ರಮ ಜೋಷಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಘಚಾಲಕ ಸದಾನಂದಪ್ರಭು, ಡಾ.ಬಸನಗೌಡ ಪಾಟೀಲ, ಡಾ.ವೆಂಕಟೇಶ ನಾಯಕ, ಡಾ.ಕಿರಣ್ ಖೇಣೆದ್, ಗೌತಮ್ ಗಿಯ, ಕೊಟ್ರೇಶಪ್ಪ ಕೋರಿ, ಸುನಿಲ್ ವರ್ಮ, ಸ್ವಾಮಿ ವಿವೇಕಾನಂದ ಸಂಸ್ಥೆಯ ಸದಸ್ಯರು, ಧನ್ವಂತ್ರಿ ಆಸ್ಪತ್ರೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.