ADVERTISEMENT

ರಾಯಚೂರು: 132 ಜನರಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 1:36 IST
Last Updated 21 ಸೆಪ್ಟೆಂಬರ್ 2020, 1:36 IST

ರಾಯಚೂರು: ಜಿಲ್ಲೆಯಲ್ಲಿ ಭಾನುವಾರ 132 ಜನರಿಗೆ ಕೋವಿಡ್‌ ದೃಢಪಟ್ಟಿದೆ. 107 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 8,574 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಭಾನುವಾರ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 130 ಜನ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 1743 ಸಕ್ರಿಯ ಪ್ರಕರಣಗಳಿದ್ದು, 336 ಜನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ತಾಲ್ಲೂಕು ಕೇಂದ್ರಗಳು ಸೇರಿ ಒಟ್ಟು 94 ಜನ ಸರ್ಕಾರಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 152 ಸೇರಿದಂತೆ ಇದುವರೆಗೆ 1,04,171 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. 93,286 ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.